ಬೆಂಗಳೂರು : ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರ ತಂದೆ ದೇವದಾಸ್ ಸುಬ್ರಾಯ ಶೇಟ್ ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರ ಸಾವಿನ ವಿಷಯವನ್ನು ಚಕ್ರವರ್ತಿ ಸೂಲಿಬೆಲೆಯವರು ಸೋಷಿಯಲ್ ಮೀಡಿಯಾ ಮೈಲಕ ತಿಳಿಸಿದ್ದಾರೆ. ದೇವದಾಸ್ ಸುಬ್ರಾಯ ಶೇಟ್ ಅವರು ಸೂಲಿಬೆಲೆಯ ಸರ್ಕಾರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆಯನ್ನು ಸಲ್ಲಿಸಿದ್ದರು.
ಮಾಜಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ಆತ್ಮೀಯರಾದ ಚಕ್ರವರ್ತಿ ಸೂಲಿಬೆಲೆ ಅವರ ತಂದೆ ದೇವಿದಾಸ್ ಸುಬ್ರಾಯ ಶೇಟ್ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಂತಾಪ ರಾಷ್ಟ್ರವಾದಿ ಚಿಂತಕ ಶ್ರೀ ಚಕ್ರವರ್ತಿ ಸೂಲಿಬೆಲೆ ಅವರ ತಂದೆ ದೇವಿದಾಸ್ ಸುಬ್ರಾಯ ಶೇಟ್ ಅವರ ನಿಧನಕ್ಕೆ ಸಂತಾಪ ಕೋರುವೆ. ಮಾನ್ಯ ಚಕ್ರವರ್ತಿ ಸೂಲಿಬೆಲೆ ಅವರ ಕುಟುಂಬ ವರ್ಗದವರಿಗೆ ಈ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ, ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಸಂತಾಪ ಸೂಚಿಸಿದ್ದಾರೆ. ನಳಿನ್ ಕುಮಾರ್ ಕಟೀಲ್ ಸೇರಿದಂತೆ ಇನ್ನೂ ಅನೇಕ ಬಿಜೆಪಿ ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ.
























