26 ವರ್ಷ ಹಿಂದಿನ ಕೋಮು ಗಲಭೆ ಪ್ರಕರಣದ ಆರೋಪಿಗಳು ಸೆರೆ

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು

ಮಂಗಳೂರು: 26 ವರ್ಷದ ಹಿಂದೆ ನಡೆದ ಕೋಮು ಗಲಭೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 31, 1998ರಂದು ಮೂಲ್ಕಿಯ ಹಳೆಯಂಗಡಿಯಲ್ಲಿ ಭುಗಿಲೆದ್ದ ಕೋಮು ಗಲಭೆಯ ಆರೋಪಿಗಳಾಗಿದ್ದ ಇವರಿಬ್ಬರು ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದರು.

ಲೀಲಾಧರ್ ಮತ್ತು ಚಂದ್ರಹಾಸ್ ಕೇಶವ್ ಶೆಟ್ಟಿ ಸೆರೆಯಾಗಿರುವ ಆರೋಪಿಗಳು. ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಐಪಿಸಿ ಸೆಕ್ಷನ್ 143, 147, 148, 436, 427 r/w 149 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಇತ್ತೀಚೆಗೆ, ಮೂಲ್ಕಿ ಸಮೀಪ ಪಕ್ಷಿಕೆರೆ ಕೆಮ್ರಾಲ್ ನಿವಾಸಿ ಲೀಲಾಧರ್ (52) ವಿದೇಶದಿಂದ ಹಿಂದಿರುಗಿ ಪಕ್ಷಿಕೆರೆ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಮೂಲ್ಕಿ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.





















































 
 

ಹಳೆಯಂಗಡಿಯ ಪೆಡುಪಣಂಬೂರಿನ ಚಂದ್ರಹಾಸ ಕೇಶವ ಶೆಟ್ಟಿ (59) ದುಬೈಗೆ ಪರಾರಿಯಾಗಿದ್ದು, ಕಳೆದ ಆಗಸ್ಟ್ 30ರಂದು ಮುಂಬೈ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಯಿತು. ಅವನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ.

error: Content is protected !!
Scroll to Top