ಭಾರತದ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ನವದೆಹಲಿ: ಭಾರತದ ನೂತನ ಉಪರಾಷ್ಟ್ರಪತಿಯಾಗಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಾರೆ.

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ತಮ್ಮ ಹುದ್ದೆಗೆ ನೀಡಿದ್ದ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಎನ್.ಡಿ.ಎ. ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ‌ರಾಧಾಕೃಷ್ಣನ್ ಅವರು ಸ್ಪಷ್ಟ ಬಹುಮತ ಪಡೆದು ಉಪರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿದ್ದಾರೆ.

ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಧಾಕೃಷ್ಣನ್ ಅವರಿಗೆ 452 ಮತಗಳು ಲಭಿಸಿದ್ದು, ಆವರು ತಮ್ಮ ಪ್ರತಿಸ್ಪರ್ಧಿ ಇಂಡಿ ಒಕ್ಕೂಟದ ಅಭ್ಯರ್ಥಿ, ಸುಪ್ರೀಂ ಕೋರ್ಟ್‌ನ ಮಾಜಿ ಜಡ್ಜ್ ನ್ಯಾ. ಬಿ. ಸುದರ್ಶನ್ ರೆಡ್ಡಿ ಅವರ ವಿರುದ್ಧ ಜಯ ಗಳಿಸಿರುವುದಾಗಿದೆ‌.





















































 
 

error: Content is protected !!
Scroll to Top