ಪುತ್ತೂರು: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕರ್ನಾಟಕ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಬಗ್ಗೆ ಮಾಹಿತಿ ಕಾರ್ಯಾಗಾರವು ದ. ಕ ಮತ್ತು ಕೊಡಗು ಜಿಲ್ಲಾ ಮಟ್ಟದ ಸಭೆಯು ತೆಂಕಿಲ ಒಕ್ಕಲಿಗ ಸಭಾಭಾವನದ ಚುಂಚಶ್ರೀಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿ. ದೀಪ ಬೆಳಗಿಸಿ ಉದ್ಘಾಟಿಸಿದರು.

ಸರ್ಕಾರವು ಸಮಾಜದ ಪ್ರತಿ ವರ್ಗಕ್ಕೂ ನ್ಯಾಯ ನೀಡುವ ದೃಷ್ಟಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದೆ. ಇದರ ಬಗ್ಗೆ ಸರಿಯಾದ ಅರಿವು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ .ಮುಂದಿನ ದಿನಗಳಲ್ಲಿ ಸಮೀಕ್ಷೆಗೆ ಸಹಕರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಚಂದ್ರಶೇಖರ ಪೇರಾಲು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಶಾಸಕ ಸಂಜೀವ ಮಠಂದೂರು, ರಾಜ್ಯ ಒಕ್ಕಲಿಗ ಸಂಘದ ಪ್ರಧಾನ ಕಾರ್ಯದರ್ಶಿ ಕೋನಪ್ಪ ರೆಡ್ಡಿ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ, ಸದಸ್ಯರುಗಳು, ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷರು ಉಪಸ್ಥಿತರಿದ್ದರು
























