ಸೋಷಿಯಲ್ ಮೀಡಿಯಾದಲ್ಲಿ ಪ್ರಧಾನಿ ಮೋದಿ ಅವರ ತಾಯಿಯ ಫೋಟೋ ಹಂಚಿದ ಕಾಂಗ್ರೆಸ್: ಬಿಜೆಪಿ ಆಕ್ರೋಶ

ನವದೆಹಲಿ: ಬಿಹಾರದ ಕಾಂಗ್ರೆಸ್ ಪಕ್ಷ ತನ್ನ ಎಕ್ಸ್ ಖಾತೆಯಲ್ಲಿ ಪ್ರಧಾನಿ ಮೋದಿ ಅವರ ತಾಯಿ ದಿ. ಹೀರಾಬೆನ್ ಅವರ ಎಐ ವಿಡಿಯೋವನ್ನು ಹಂಚಿಕೊಂಡಿದ್ದು, ಬಿಜೆಪಿ ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ.

ಸುಮಾರು 36 ಸೆಕೆಂಡ್‌ಗಳ ವಿಡಿಯೋ ಇದಾಗಿದ್ದು, ಬಿಹಾರದ ಚುನಾವಣೆಗೂ ಮೊದಲು ವೈಯಕ್ತಿಕ ನೆಲೆಯಲ್ಲಿ ದಾಳಿ ಮಾಡುವ ಉದ್ದೇಶದಿಂದ ಈ ವಿಡಿಯೋ ಹಂಚಿಕೊಂಡಿದೆ ಎಂದು ಬಿಜೆಪಿ ಆಕ್ರೋಶ ತೋರಿಸಿದೆ. ಆದರೆ ಇದರಲ್ಲಿ ಯಾರಿಗೂ ಅವಮಾನ ಮಾಡಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಈ ವಿಡಿಯೋವನ್ನು ಪ್ರಧಾನಿ ಮೋದಿ ಸಾಹೇಬರ ಕನಸಿನಲ್ಲಿ ಬಂದ ತಾಯಿ ಎಂಬ ಶಿರ್ಷಿಕೆಯಡಿ ಶೇರ್ ಮಾಡಲಾಗಿದೆ. ಚುನಾವಣಾ ಪೂರ್ವದಲ್ಲೇ ಇಂತಹ ಕೀಳು ಮನಸ್ಥಿತಿ ತೋರಿಸಿರುವ ಕಾಂಗ್ರೆಸ್ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಪಟ್ಟು ಹಿಡಿದಿದೆ‌.





















































 
 

ಈ ವಿಡಿಯೋದಲ್ಲಿ ಪ್ರಧಾನಿ ಮೋದಿ ಅವರ ಕನಸಿನಲ್ಲಿ ಬಂದ ಅವರ ತಾಯಿ ಬಿಹಾರದಲ್ಲಿ ನನ್ನ ಹೆಸರು ಹೇಳಿ ರಾಜಕೀಯ ಮಾಡುತ್ತೀಯಾ ಎಂದು ಪ್ರಶ್ನೆ ಕೇಳಿದ್ದಾರೆ.

error: Content is protected !!
Scroll to Top