ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿವಾದ : ಇಂದು ಹೈಕೋರ್ಟ್‌ನಲ್ಲಿ ಅರ್ಜಿಗಳ ವಿಚಾರಣೆ

ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿರುವ ಮಾಜಿ ಸಂಸದ ಪ್ರತಾಪ್ ಸಿಂಹ

ಬೆಂಗಳೂರು: ನಾಡಹಬ್ಬ ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಇಂದು ನಡೆಯಲಿದೆ. ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ, ಗಿರೀಶ್ ಕುಮಾರ್ ಮತ್ತು ಗೌರವ್‌ ಎಂಬವರಿಂದ ಪಿಐಎಲ್ ಸಲ್ಲಿಕೆಯಾಗಿದ್ದು, ಹೈಕೋರ್ಟ್ ಮುಖ್ಯ ನ್ಯಾ.ವಿಭು ಬಕ್ರು ನೇತೃತ್ವದ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು, ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆ ಮಾಡುವ ಸಂಪ್ರದಾಯವಿದೆ. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಭಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದು ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟಾಗಿದೆ. ಹೀಗಾಗಿ ಬಾನು ಮುಷ್ತಾಕ್‌ಗೆ ನೀಡಿದ ಆಹ್ವಾನ ಹಿಂಪಡೆಯಲು ನಿರ್ದೇಶನ ನೀಡಬೇಕು ಅನ್ನೋದು ಅರ್ಜಿದಾರರ ಮನವಿ ಆಗಿದೆ.





















































 
 

ದಸರಾ ಹಿಂದೂ ಧಾರ್ಮಿಕ ಸಂಪ್ರದಾಯದ ಅವಿಭಾಜ್ಯ ಭಾಗವಾಗಿದ್ದು, ಹಿಂದೂ ಆಗಮಿಕ ಪದ್ಧತಿ ಪ್ರಕಾರ ಕಟ್ಟುನಿಟ್ಟಾಗಿ ದಸರಾ ಉದ್ಘಾಟನೆ ನಡೆಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಲಾಗಿದೆ.ಮೂರು ಪ್ರತ್ಯೇಕ ಪಿಐಎಲ್‌ಗಳ ಮೂಲಕ ಮನವಿ ಸಲ್ಲಿಸಲಾಗಿದ್ದು, ಇಂದು ಹೈಕೋರ್ಟ್‌ನಲ್ಲಿ ದಸರಾ ಉದ್ಘಾಟನೆ ವಿವಾದ ಇತ್ಯರ್ಥವಾಗಲಿದೆ.

error: Content is protected !!
Scroll to Top