ಪ್ರಚೋದನಾತ್ಮಕ ಭಾಷಣದ ಆರೋಪದಲ್ಲಿ ಯತ್ನಾಳ್ ವಿರುದ್ಧ ಕೇಸು ದಾಖಲು

ಬೆಂಗಳೂರು: ಗಣೇಶೋತ್ಸವ ಶೋಭಾಯಾತ್ರೆಯಲ್ಲಿ ಪ್ರಚೋದನಾತ್ಮಕವಾಗಿ ಮಾತನಾಡಿದ್ದಾರೆ ಎಂಬ ಆರೋಪದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ.

ತುಮಕೂರಿನಲ್ಲಿ ನಡೆದ ಗಣೇಶೋತ್ಸವದಲ್ಲಿ ಪ್ರಚೋದನಾತ್ಮಕವಾಗಿ ಮಾತನಾಡಿದ್ದಾರೆ ಎಂಬ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಮದ್ದೂರಿನಲ್ಲಿಯೂ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡಿದ್ದರು ಎಂಬ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು.

ಅವರು ತುಮಕೂರಿನಲ್ಲಿ ಶನಿವಾರ ನಡೆದ ಗಣೇಶ ವಿಸರ್ಜನಾ ಯಾತ್ರೆಯಲ್ಲಿ ಭಾಗವಹಿಸಿದ್ದು, ಈ ವೇಳೆ ಅನ್ಯ ಕೋಮಿನ ಜನರ ಭಾವನೆಗಳಿಗೆ ಧಕ್ಕೆಯಾಗುವಂತೆ ಮಾತನಾಡಿದ್ದಾಗಿ ಪೊಲೀಸ್ ಸಿಬ್ಬಂದಿ ರಘುನಾಥ್ ದೂರು ನೀಡಿರುವುದಾಗಿದೆ. ಈ ಸಂಬಂಧ ತುಮಕೂರು ನಗರ ಠಾಣೆಯಲ್ಲಿ FIR ದಾಖಲಾಗಿದೆ.





















































 
 

error: Content is protected !!
Scroll to Top