ಪುತ್ತೂರು: ಇಲ್ಲಿನ ನೆಲ್ಲಿಕಟ್ಟೆಯ ಖಾಸಗಿ ಬಸ್ ನಿಲ್ದಾಣದ ಎದುರು ನೂತನವಾಗಿ ಸ್ಥಾಪಿತವಾಗಿರುವ ಎವಿಜಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಇದರ ಆಡಳಿತ ಮಂಡಳಿಯ ಪ್ರಥಮ ಸಭೆಯು ಸೊಸೈಟಿಯ ಅಧ್ಯಕ್ಷರಾದ ಕಳುವಾಜೆ ವೆಂಕಟ್ರಮಣ ಗೌಡರ ಅಧ್ಯಕ್ಷತೆಯಲ್ಲಿ ನಡೆಯಿತು.

ದಿನಾಂಕ 29 ಸೆಪ್ಟೆಂಬರ್ 2025ನೆ ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ‘ನಟರಾಜ ವೇದಿಕೆ’ಯಲ್ಲಿ ಎವಿಜಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ.ನ ಲೋಕಾರ್ಪಣ ಸಮಾರಂಭ ನಡೆಯಲಿದ್ದು ಅದರ ಕುರಿತು ವಿಸ್ತೃತ ಚರ್ಚೆ ನಡೆಸಿ ಕಾರ್ಯಕ್ರಮದ ರೂಪುರೇಷೆಯನ್ನು ಅಂತಿಮಗೊಳಿಸಲಾಯಿತು.

ಲೋಕಾರ್ಪಣ ಸಮಾರಂಭದಲ್ಲಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಜೆ. ಗಂಗಾಧರರು ಕಛೇರಿಯನ್ನು ಉದ್ಘಾಟಿಸಿಲಿದ್ದಾರೆ. ಇದೇ ಸಂದರ್ಭದಲ್ಲಿ ಪುತ್ತೂರಿನ ನಿಕಟ ಪೂರ್ವ ಶಾಸಕರಾದ ಸಂಜೀವ ಮಠಂದೂರರು ಭದ್ರತಾ ಕೋಶದ ಉದ್ಘಾಟನೆ, ಎಸ್.ಡಿ.ಸಿ.ಸಿ. ಬ್ಯಾಂಕ್ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಗಣಕ ಯಂತ್ರದ ಉದ್ಘಾಟನೆ ಮತ್ತು ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಭಾಸ್ಕರ ದೇವಸ್ಯ ಅವರು ಅಧ್ಯಕ್ಷರ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ. ನಟರಾಜ ವೇದಿಕೆಯಲ್ಲಿ ನಡೆಯುವ ಔಪಚಾರಿಕ ಸಭೆಯಲ್ಲಿ ಪುತ್ತೂರಿನ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈಯವರು ದೀಪೋಜ್ವಲನೆ, ಪುತ್ತೂರು ನಗರಸಭೆಯ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಪ್ರಥಮ ಸಾಲ ಪತ್ರದ ವಿತರಣೆ, ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್. ಪ್ರಥಮ ಠೇವಣಿ ಪತ್ರ ವಿತರಣೆ, ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ಟರು ಸಂಸ್ಥೆಯ ಚಿಹ್ನೆಯ ಅನಾವರಣ ಕಾರ್ಯಗಳನ್ನು ನೆರವೇರಿಸಲಿದ್ದಾರೆ. ರಾಜ್ಯ ಸೌಹಾರ್ದ ಸಹಕಾರಿ ನಿ., ಬೆಂಗಳೂರು ಇದರ ನಿರ್ದೇಶಕರಾದ ಭಾರತಿ ಜಿ. ಭಟ್, ಪುತ್ತೂರಿನ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಚಿದಾನಂದ ಬೈಲಾಡಿ, ಪುತ್ತೂರಿನ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಮತ್ತು ಸೊಸೈಟಿಯ ಮುಖ್ಯ ಪ್ರವರ್ತಕರಾದ ಎ.ವಿ. ನಾರಾಯಣ ಅವರು ಮುಖ್ಯ ಅತಿಥಿಯವರಾಗಿರುತ್ತಾರೆ. ಸೊಸೈಟಿಯ ಅಧ್ಯಕ್ಷರಾದ ಶ್ರೀ ಕಳುವಾಜೆ ವೆಂಕಟ್ರಮಣ ಗೌಡರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.ಸೊಸೈಟಿಯ ಉಪಾಧ್ಯಕ್ಷ ಉಮೇಶ್ ಮಳುವೇಲು ಅವರೊಂದಿಗೆ ನಿರ್ದೇಶಕರುಗಳಾದ ಗುಡ್ಡಪ್ಪ ಗೌಡ ಬಲ್ಯ, ಸೀತಾರಾಮ ಕೇವಳ, ಟಿ ಗಂಗಯ್ಯ ಗೌಡ, ಜಯಪ್ರಕಾಶ್ ಕಳುವಾಜೆ, ಎಚ್. ಸುಂದರ ಗೌಡ, ಕೆ., ಪದ್ಮಪ್ಪ ಗೌಡ ಕೆ. ಮಾಧವ ಗೌಡ, ಮೋಹನ ಜಿ, ಶ್ರೀಮತಿ ವೇದಾವತಿ ಶೀನಪ್ಪ ಗೌಡ ಬೈತ್ತಡ್ಕ, ಶ್ರೀಮತಿ ಉಷಾಲಕ್ಷ್ಮೀ ಕೆ. ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಸೀತಾರಾಮ ಗೌಡ ಕಾಂತಿಲ ಭಾಗವಹಿಸಲಿದ್ದಾರೆ.
ಸೊಸೈಟಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಅನಿಸಿಕೆಗಳನ್ನು ಪ್ರಸ್ತುತ ಪಡಿಸಿದ ಬಳಿಕ ನಿರ್ದೇಶಕ ಸೀತಾರಾಮ ಕೇವಳ ಮೊದಲ ಆಡಳಿತ ಮಂಡಳಿಯನ್ನು ಅಭಿನಂದಿಸಿ ಮಾತನಾಡಿದರು. ಆರಂಭದಲ್ಲಿ ಎ.ವಿ. ನಾರಾಯಣರು ಸರ್ವರನ್ನೂ ಸ್ವಾಗತಿಸಿ ಸೀತಾರಾಮ ಗೌಡ ಕಾಂತಿಲ ಧನ್ಯವಾದ ಸಮರ್ಪಿಸಿದರು. ಶ್ರೀಮತಿ ನವ್ಯಾ ಚೇತನ್ ವಿವಿಧ ಕಾರ್ಯಗಳಲ್ಲಿ ಸಹಕರಿಸಿದರು.
























