ಪ್ರಧಾನಿ ಮೋದಿ, ಅವರ ತಾಯಿಗೆ ಅವಮಾನ: ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗ ‌ಮಾಡಿದ ಕೋರ್ಟ್ ತೀರ್ಪು

ಪಾಟ್ನಾ: ಪ್ರಧಾನಿ ಮೋದಿ ಮತ್ತು ಅವರ ತಾಯಿಯ AI ವಿಡಿಯೋಗಳನ್ನು ಪೋಸ್ಟ್ ಮಾಡಿರುವ ಎಲ್ಲಾ ಸಾಮಾಜಿಕ ಜಾಲತಾಣ ಖಾತೆಗಳಿಂದಲೂ ತೆಗೆದು ಹಾಕುವಂತೆ ಕಾಂಗ್ರೆಸ್ ಪಕ್ಷಕ್ಕೆ ಪಾಟ್ನಾ ಹೈಕೋರ್ಟ್ ಆದೇಶ ನೀಡಿದ್ದು, ಇದು ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗ ಉಂಟುಮಾಡಿದೆ.

ಪಾಟ್ನಾ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಪಿ. ಬಿ. ಬಜಂತ್ರಿ ಅವರು ಈ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾ ಖಾತೆಗಳಿಂದ ಅಳಿಸಿ ಹಾಕುವಂತೆ ಕಾಂಗ್ರೆಸ್ ಪಕ್ಷಕ್ಕೆ ನಿರ್ದೇಶನ ನೀಡಿರುವುದಾಗಿದೆ.

ಸೆ. 10 ರಂದು ಬಿಹಾರದ ಕಾಂಗ್ರೆಸ್ ಘಟಕ 36 ಸೆಕೆಂಡ್‌ಗಳ ಎಐ ಜನರೇಟೆಡ್ ವಿಡಿಯೋವನ್ನು ಪ್ರಸಾರ ಮಾಡಿತ್ತು. ಕಾಂಗ್ರೆಸ್ ಪಕ್ಷದ ಈ ಕೀಳು ಕುತಂತ್ರವನ್ನು ಬಿಜೆಪಿ ಮತ್ತು ಎನ್‌ಡಿಎ ಪಕ್ಷಗಳು ತೀವ್ರವಾಗಿ ಖಂಡಿಸಿದ್ದವು.





















































 
 

ಆದರೆ ತಾವು ಪ್ರಧಾನಿ ಮೋದಿ ಅವರ ತಾಯಿಗೆ ಯಾವುದೇ ರೀತಿಯಲ್ಲೂ ಅಗೌರವ ತೋರಿಸಿಲ್ಲ ಎಂದು ಕಾಂಗ್ರೆಸ್ ಹೇಳುವ ಮೂಲಕ ಈ ಪ್ರಕರಣಕ್ಕೆ ತೇಪೆ ಹಚ್ಚುವ ಕೆಲಸ ಮಾಡಿತ್ತಾದರೂ, ಕಾಂಗ್ರೆಸ್ ಪಕ್ಷಕ್ಕೆ ಕೋರ್ಟ್ ಈ ವಿಡಿಯೋಗಳನ್ನು ತೆಗೆದು ಹಾಕಬೇಕು ಎಂದಿದ್ದು, ಇದು ಕಾಂಗ್ರೆಸ್ ಪಕ್ಷಕ್ಕೆ ಮಜುಗರ ಉಂಟು ಮಾಡಿದೆ ಎನ್ನಬಹುದು.

error: Content is protected !!
Scroll to Top