ಮತ್ತೊಮ್ಮೆ ಬೆಳ್ಳಿತೆರೆಯಲ್ಲಿ ರಾರಾಜಿಸಲಿದೆ ಮೋದಿ ಬಯೋಪಿಕ್‌

ನರೇಂದ್ರ ಮೋದಿ ಜೀವನಾಧಾರಿತ ಸಿನಿಮಾ ಘೋಷಣೆ, ಮೋದಿಯಾಗಲಿರುವುದು ಇವರೇ…

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಬದುಕು ಇನ್ನೊಮ್ಮೆ ಬೆಳ್ಳಿತೆರೆ ಮೇಲೆ ಬರಲಿದೆ. ಮೋದಿಯವರ ಜನ್ಮದಿನವಾದ ಇಂದೇ ಅವರ ಕುರಿತು ಇನ್ನೊಂದು ಸಿನಿಮಾ ಘೋಷಣೆಯಾಗಿದೆ. ಈಗಾಗಲೇ ನರೇಂದ್ರ ಮೋದಿ ಜೀವನ ಆಧರಿಸಿದ ‘ಪಿಎಂ ನರೇಂದ್ರ ಮೋದಿ’ ಸಿನಿಮಾ 2019ರಲ್ಲಿ ಬಿಡುಗಡೆ ಆಗಿತ್ತು. ನರೇಂದ್ರ ಮೋದಿ ಪಾತ್ರದಲ್ಲಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ನಟಿಸಿದ್ದರು. ಆದರೆ ಬಾಕ್ಸಾಫೀಸಿನಲ್ಲಿ ಈ ಚಿತ್ರ ಹೇಳಿಕೊಳ್ಳುವಷ್ಟು ಗಳಿಕೆ ಮಾಡಿರಲಿಲ್ಲ. ಇದೀಗ ಮತ್ತೊಮ್ಮೆ ನರೇಂದ್ರ ಮೋದಿ ಜೀವನ ಬೆಳ್ಳಿ ಪರದೆಗೆ ಬರಲಿದೆ. ಈ ಬಾರಿ ಮಲಯಾಳಂ ನಟರೊಬ್ಬರು ನರೇಂದ್ರ ಮೋದಿ ಪಾತ್ರದಲ್ಲಿ ನಟಿಸಲಿದ್ದಾರೆ.

ಈ ಹಿಂದೆ ‘ಲೀಗಲಿ ವೀರ್’ ಹೆಸರಿನ ತೆಲುಗು ಸಿನಿಮಾ ನಿರ್ಮಾಣ ಮಾಡಿದ್ದ ಸಿಲ್ವರ್ ಕ್ಯಾಸ್ಟ್ ಕ್ರಿಯೇಷನ್ಸ್ ನಿರ್ಮಾಣ ಸಂಸ್ಥೆ ಮೋದಿ ಕುರಿತು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದೆ. ಸಿನಿಮಾ ಬಗ್ಗೆ ಇಂದು (ಸೆಪ್ಟೆಂಬರ್ 17) ಘೋಷಣೆ ಮಾಡಲಾಗಿದ್ದು, ಸಿನಿಮಾಕ್ಕೆ ‘ಮಾ ವಂದೇ’ ಎಂದು ಹೆಸರಿಡಲಾಗಿದೆ. ವೀರ್ ರೆಡ್ಡಿ ಎಂ ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದು, ಮಲಯಾಳಂನ ಜನಪ್ರಿಯ ನಟ ಉಣ್ಣಿ ಮುಕುಂದನ್ ನರೇಂದ್ರ ಮೋದಿಯವರ ಪಾತ್ರದಲ್ಲಿ ನಟಿಸಲಿದ್ದಾರೆ.





















































 
 

‘ಮಾ ವಂದೇ’ ಸಿನಿಮಾವನ್ನು ಕ್ರಾಂತಿ ಕುಮಾರ್ ಸಿ.ಎಚ್. ನಿರ್ದೇಶನ ಮಾಡಲಿದ್ದಾರೆ. ನರೇಂದ್ರ ಮೋದಿ ಅವರ ಬಾಲ್ಯದಿಂದ ಹಿಡಿದು ಪ್ರಧಾನಿ ಆಗುವವರೆಗಿನ ಪಯಣವನ್ನು ಸಿನಿಮಾನಲ್ಲಿ ತೋರಿಸಲಾಗುವುದು ಎಂದಿದೆ ನಿರ್ಮಾಣ ಸಂಸ್ಥೆ. ಮೋದಿ ಅವರ ವೈಯಕ್ತಿಕ ಜೀವನ ಹಾಗೂ ರಾಜಕೀಯ ಜೀವನದ ಸತ್ಯ ಘಟನೆಗಳನ್ನು ಆಧರಿಸಿ ಈ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ. ಸಿನಿಮಾಕ್ಕೆ ಕನ್ನಡಿಗ ರವಿ ಬಸ್ರೂರು ಅವರು ಸಂಗೀತ ನೀಡಲಿರುವುದು ವಿಶೇಷ.

ಈ ಚಿತ್ರ ಮೋದಿ ಅವರ ವೈಯಕ್ತಿಕ ಮತ್ತು ರಾಜಕೀಯ ಪ್ರಯಾಣದ ಘಟನೆಗಳು ಮತ್ತು ಮೈಲಿಗಲ್ಲುಗಳನ್ನು ಒಳಗೊಂಡಿರಲಿದೆ. ‘ಮಾ ವಂದೇ’ ಚಿತ್ರವನ್ನು ಪ್ಯಾನ್ ಇಂಡಿಯಾ ಭಾಷೆಗಳಲ್ಲಿ ಹಾಗೂ ಇಂಗ್ಲಿಷ್‌ನಲ್ಲಿಯೂ ನಿರ್ಮಿಸಲಾಗುವುದು. ಮೋದಿ ಮತ್ತು ಅವರ ತಾಯಿ ಹೀರಾಬೆನ್ ನಡುವಿನ ಬಾಂಧವ್ಯವನ್ನು ಚಿತ್ರದಲ್ಲಿ ಭಾವನಾತ್ಮಕವಾಗಿ ತೋರಿಸುವ ಆಲೋಚನೆ ಇದೆ. ರಾಷ್ಟ್ರ ಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ನಾಯಕನ ಗಮನಾರ್ಹ ಪ್ರಯಾಣವನ್ನು ನಾವು ಪ್ರೇಕ್ಷಕರಿಗೆ ತರುತ್ತಿದ್ದೇವೆ ಎಂದಿದ್ದಾರೆ ನಿರ್ದೇಶಕರು.

error: Content is protected !!
Scroll to Top