ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಬೆಂಗಳೂರು: ವಿಶ್ವವಿಖ್ಯಾತ ನಾಡ ಹಬ್ಬ ದಸರಾವನ್ನು ಬಾನು ಮುಷ್ತಾಕ್ ಅವರು ಉದ್ಘಾಟನೆ ಮಾಡುವ ರಾಜ್ಯಸರ್ಕಾರದ ನಿರ್ಧಾರದ ವಿರುದ್ಧ ಈಗ ಸುಪ್ರೀಂ ಕೋರ್ಟ್ ಅಂಗಳಕ್ಕೂ ದೂರು ಹೋಗಿದೆ.

H.S. ಗೌರವ್ ಎಂಬವರು ಈ‌ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಈಗಾಗಲೇ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನೆ ಮಾಡಿ, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಇನ್ನೇನು ನಾಡ ಹಬ್ಬ ದಸರಾ ಆಚರಣೆ ಆರಂಭವಾಗಲಿದೆ. ಹಾಗಾಗಿ ಈ ಅರ್ಜಿಯ ಶೀಘ್ರ ವಿಚಾರಣೆಗಾಗಿಯೂ ಅವರು ಮನವಿ ಮಾಡಿಕೊಂಡಿದ್ದಾರೆ. ಅರ್ಜಿ ಪುರಸ್ಕರಿಸಿರುವ ಕೋರ್ಟ್ ಇದನ್ನು ಶುಕ್ರವಾರ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ.





















































 
 

error: Content is protected !!
Scroll to Top