ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರ : ಯೋಗ ಗುರು ಪೋಕ್ಸೊ ಅಡಿ ಬಂಧನ

ಯೋಗ ಕಲಿಯಲು ಬರುತ್ತಿದ್ದ ಮಹಿಳೆಯರ ಲೈಂಗಿಕ ಶೋಷಣೆ ನಡೆಸುತ್ತಿದ್ದ ಗುರು

ಬೆಂಗಳೂರು: ತನ್ನ ಯೋಗ ಸೆಂಟರ್​ಗೆ ಯೋಗ ಕಲಿಯಲು ಬರುತ್ತಿದ್ದ ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪದ ಅಡಿಯಲ್ಲಿ ಯೋಗ ಗುರು ನಿರಂಜನಾ ಮೂರ್ತಿ ಎಂಬಾತನನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಹದಿನೇಳು ವರ್ಷದ ಬಾಲಕಿ ದೂರಿನ ಅನ್ವಯ ಪೋಕ್ಸೊ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಾಗಿದೆ. ಅತ್ಯಾಚಾರ ಎಸಗಿರುವುದು ತನಿಖೆ ವೇಳೆ ಬಯಲಾಗಿದೆ.

ಯೋಗ ಗುರು ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರ ನಡೆಸುತ್ತಿದ್ದ. ನಿಮಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗದಲ್ಲಿ ಹೆಸರು ಬರುವಂತೆ ಮಾಡುತ್ತೇನೆ. ನಿಮಗೆ ಆದರಿಂದ ಸರ್ಕಾರಿ ಕೆಲಸವು ಸಿಗಬಹುದು ಎಂದು ನಂಬಿಸಿ ಯೋಗ ಸೆಂಟರ್​ಗೆ ಬರುತ್ತಿದ್ದ ಯುವತಿಯರು ಸೇರಿದಂತೆ ಸುಮಾರು ಏಳೆಂಟು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದ.





















































 
 

ಹದಿನೇಳು ವರ್ಷದ ಬಾಲಕಿ ಮೇಲೆ ಕೂಡ ಆರೋಪಿ ಅತ್ಯಾಚಾರವೆಸಗಿದ್ದ. ಬಾಲಕಿ ದೂರಿನ ಅನ್ವಯ ರಾಜರಾಜೇಶ್ವರಿ ನಗರ ಪೊಲೀಸರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದರು. ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರಿಸಿಕೊಂಡಿದ್ದ. ಪೊಲೀಸರು ಹುಡುಕಿ ಆತನನ್ನು ಬಂಧಿಸಿದ್ದಾರೆ. ಆರೋಪಿ ಹಲವು ಬಾಲಕಿಯರು ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ಮಾಹಿತಿ ಇದೆ. ಈ ಯೋಗ ಗುರುವಿನಿಂದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರಕ್ಕೆ ಒಳಗಾಗಿದ್ದರೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಲು ಪೊಲೀಸರು ಸೂಚನೆ ನೀಡಿದ್ದಾರೆ. ದೂರುದಾರರ ಮಾಹಿತಿಯನ್ನು ಗೌಪ್ಯವಾಗಿಡುವುದಾಗಿ ತಿಳಿಸಿದ್ದಾರೆ.

error: Content is protected !!
Scroll to Top