ಆಳಂದ ಮತ ಕಳ್ಳತನ ಆರೋಪ : ತನಿಖೆಗೆ ಎಸ್‌ಐಟಿ ರಚನೆ

ಕರ್ನಾಟಕದಲ್ಲಿ ನಡೆದ ಎಲ್ಲ ವೋಟ್‌ ಚೋರಿ ಪ್ರಕರಣಗಳ ತನಿಖೆ

ಬೆಂಗಳೂರು : ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರನ್ನು ಮತದಾರರ ಪಟ್ಟಿಯಿಂದ ಅನಧಿಕೃತವಾಗಿ ಕೈಬಿಡಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಳಂದ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆ ನಡೆಸಲು ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್​ಐಟಿ) ರಚಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಕಾಂಗ್ರೆಸ್ ಆರೋಪ ಮಾಡಿರುವಂತೆ ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಎಲ್ಲ ‘ವೋಟ್ ಚೋರಿ’ (ಮತಗಳ್ಳತನ) ತನಿಖೆಗೆ ರಾಜ್ಯ ಸರ್ಕಾರ ಆದೇಶ ಮಾಡಿದೆ.

ಮಹದೇವಪುರ ಮತ್ತು ಆಳಂದ ಕ್ಷೇತ್ರ ಸೇರಿ ರಾಜ್ಯದ ಎಲ್ಲ ಮತಗಳ್ಳತನ ಪ್ರಕರಣಗಳನ್ನ ತನಿಖೆ ನಡೆಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು (SIT) ರಚನೆ ಮಾಡಿ ಆದೇಶ ಹೊರಡಿಸಿದೆ. ಈ ಪ್ರಕರಣದ ತನಿಖೆಗಾಗಿ ಸಿಐಡಿ ಅಪರ ಪೊಲೀಸ್ ಮಹಾನಿರ್ದೇಶಕ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡಲಾಗಿದೆ.‌ ಸಿಐಡಿ ಎಸ್‌ಪಿ ಸೈದುಲು ಅದಾವತ್ ಮತ್ತು ಸಿಐಡಿ ಎಸ್‌ಪಿ ಶುಭಾನ್ವಿತ ಈ ಎಸ್‌ಐಟಿ ತಂಡದಲ್ಲಿರಲಿದ್ದಾರೆ. ಇತ್ತೀಚೆಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದೆಹಲಿಯಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮತಗಳ್ಳತನದ ಆರೋಪ ಮಾಡಿದ್ದರು.





















































 
 

ಕಳೆದ ಬಾರಿ ಬೆಂಗಳೂರು ಕೇಂದ್ರ ಲೋಕಸಭಾ ವ್ಯಾಪ್ತಿಯ ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂದು ಅರೋಪ ಮಾಡಿದ್ದ ರಾಹುಲ್‌ ಗಾಂಧಿ, ಇದಾದ ಬಳಿಕ ಕಲಬುರ್ಗಿಯ ಆಳಂದದಲ್ಲೂ ಭಾರಿ ಮತಗಳ್ಳತನವಾಗಿದೆ ಎಂದು ಆರೋಪ ಮಾಡಿದ್ದರು. ಕರ್ನಾಟಕದ ಆಳಂದ ಕ್ಷೇತ್ರದ ಬಗ್ಗೆಯೂ ರಾಹುಲ್ ಉಲ್ಲೇಖಿಸಿದ್ದು, 6018 ಮತಗಳ ಕಳ್ಳತನ ಆಗಿದೆ ಎಂದು ಹೇಳಿದ್ದರು. ಈ ಆರೋಪದಲ್ಲಿ ಬಿಜೆಪಿ ಮತ್ತು ಚುನಾವಣಾ ಆಯೋಗ ಶಾಮೀಲಾಗಿದೆ ಎಂದು ಆರೋಪ ಮಾಡಿದ್ದರು.

ಆಳಂದದಲ್ಲಿ ಬಿಎಲ್​ಒ ಅವರ ಸಂಬಂಧಿಯ ಹೆಸರು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿತ್ತು. ಆಗ ತನಿಖೆ ಆರಂಭಿಸಿದಾಗ ಅವರ ಸಂಬಂಧಿಯ ಪಕ್ಕದ ಮನೆಯವರು ಅವರ ಹೆಸರನ್ನು ತೆಗೆಸಿದ್ದಾರೆ ಎಂಬುದು ತಿಳಿದುಬಂದಿತ್ತು. ಬಳಿಕ ಅಲ್ಲಿ ಹೋಗಿ ವಿಚಾರಿಸಿದಾಗ ನಾವು ಅರ್ಜಿ ಕೊಟ್ಟಿಲ್ಲ, ಯಾರ ಹೆಸರನ್ನೂ ತೆಗೆಸಿಲ್ಲ ಎಂದು ಹೇಳಿದಾಗ ಕೆಲವು ವಿಚಾರಗಳು ಬಹಿರಂಗಗೊಂಡಿತ್ತು. ಒಬ್ಬರ ಹೆಸರು ಬಳಸಿಕೊಂಡು ಮತದಾರರ ಪಟ್ಟಿಯಿಂದ 12 ಜನರ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಿರುವುದು ತಿಳಿದುಬಂದಿತ್ತು. ಆದರೆ ಅವರು ನಾನು ಯಾವ ಅರ್ಜಿಯನ್ನೂ ಕೊಟ್ಟಿಲ್ಲ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ಆಳಂದಲ್ಲಿ 6018 ಜನರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. ಎಲ್ಲ ಹೆಸರುಗಳನ್ನು ಕರ್ನಾಟಕದ ಮೊಬೈಲ್ ಸಂಖ್ಯೆಯಿಂದಲೇ ಡಿಲೀಟ್ ಮಾಡಲಾಗಿದೆ. ಆದರೆ, ಎಲ್ಲೋ ಕುಳಿತು ಈ ಹೆಸರುಗಳನ್ನು ತೆಗೆಸಲಾಗಿದೆ. ನಾವು ಪ್ರಜಾಪ್ರಭುತ್ವದ ಮೌಲ್ಯವನ್ನು ಉಳಿಸುವ ಕೆಲಸವನ್ನು ಮಾಡುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

error: Content is protected !!
Scroll to Top