ದಸರಾ ಉದ್ಘಾಟನೆಗೆ ಕ್ಷಣಗಣನೆ : ಬಾನು ಮುಷ್ತಾಕ್‌ಗೆ ಭಾರಿ ಭದ್ರತೆ

ಖಾಸಗಿ ಹೋಟೆಲಿನಲ್ಲಿರುವ ಬಾನು ಮುಸ್ತಾಕ್‌ಗೆ 3 ಕೆಎಸ್‌ಆರ್‌ಪಿ ತುಕಡಿಯ ಸೆಕ್ಯುರಿಟಿ

ಮೈಸೂರು: ನಾಡಹಬ್ಬ ದಸರಾ ಉದ್ಘಾಟನೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ವಿರೋಧದ ನಡುವೆ ಉದ್ಘಾಟನೆಗಾಗಿ ಆಗಮಿಸಿರುವ ಸಾಹಿತಿ ಬಾನು ಮುಷ್ತಾಕ್‌ ಖಾಸಗಿ ಹೋಟೆಲಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಅವರಿಗೆ ಸರ್ಕಾರ ಬಿಗಿ ಭದ್ರತೆಯ ವ್ಯವಸ್ಥೆ ಮಾಡಿದೆ.

ಸ್ಥಳದಲ್ಲಿ 3 ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಿದ್ದು, ಬೆಳಗ್ಗೆ 9.30ಕ್ಕೆ ಹೋಟೆಲಿನಿಂದ ಬಾನು ಮುಷ್ತಾಕ್‌ ಪೊಲೀಸ್‌ ಎಸ್ಕಾರ್ಟ್‌ ಮೂಲಕ ಚಾಮುಂಡಿ ಬೆಟ್ಟಕ್ಕೆ ತೆರಳಲಿದ್ದಾರೆ.





















































 
 

ಬಾನು ಮುಷ್ತಾಕ್‌ ಆಯ್ಕೆ ಮಾಡಿದ್ದಕ್ಕೆ ಹಿಂದೂ ಸಂಘಟನೆಗಳು, ಬಿಜೆಪಿ ನಾಯಕರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಪೊಲೀಸರಿಂದ ಭಾರೀ ಭದ್ರತೆ ನೀಡಲಾಗಿದೆ.

ಉದ್ಘಾಟಕರ ಸ್ವಾಗತಕ್ಕೆ ಚಾಮುಂಡಿ ಬೆಟ್ಟ ಸಿದ್ಧವಾಗಿದ್ದು ಮಹಿಷಾಸುರ ಮೂರ್ತಿಯಿಂದ ದೇವಾಲಯದವರೆಗೆ ಸಾಂಪ್ರಾದಾಯಿಕ ಸ್ವಾಗತ ನೀಡಲಾಗುತ್ತದೆ. ರಸ್ತೆ ಉದ್ದಕ್ಕೂ ರಂಗೋಲಿ ಬಿಡಿಸಿ, ಬಾಳೆಕಂಬ ಕಟ್ಟಿ ಸ್ವಾಗತಿಸಲು ತಯಾರಿ ನಡೆದಿದೆ. ಮೂರು ಕಡೆ ಚೆಕ್ಕಿಂಗ್‌ ಪಾಯಿಂಟ್‌ ಇದ್ದು ಆಗಮಿಸುವ ಪ್ರತಿಯೊಬ್ಬರನ್ನು ಪರಿಶೀಲಿಸಿದ ಬಳಿಕವಷ್ಟೇ ಬೆಟ್ಟಕ್ಕೆ ಪ್ರವೇಶ ಕಲ್ಪಿಸಲಾಗುತ್ತದೆ.

ಉದ್ಘಾಟನೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ, ಉದ್ಘಾಟಕರಾದ ಬಾನು ಮುಸ್ತಾಕ್ ಸೇರಿದಂತೆ ಗಣ್ಯರಿಗೆ ಮಹಿಷಾ ಮೂರ್ತಿ ಬಳಿ ಜಿಲ್ಲಾಡಳಿತ ಸ್ವಾಗತ ನೀಡಲಿದೆ. ಅಲ್ಲಿಂದ ಅಲ್ಲಿಂದ ತೆರೆದ ವಾಹನ ಅಥವಾ ಕಾಲ್ನಡಿಗೆ ಮೂಲಕ ಚಾಮುಂಡೇಶ್ವರಿ ದೇವಾಸ್ಥಾನಕ್ಕೆ ಗಣ್ಯರು ತೆರಳಲಿದ್ದಾರೆ. ದೇವರ ದರ್ಶನ ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದೆ.

error: Content is protected !!
Scroll to Top