ವಿಟ್ಲ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ನಾರಾಯಣ (42) ಎಂಬಾತನನ್ನು ಪೊಲೀಸರು ಈ ಸಂಬಂಧ ಬಂಧಿಸಿದ್ದಾರೆ.
ತಂದೆ-ತಾಯಿ ಕೆಲಸಕ್ಕೆ ಕೆಲಸಕ್ಕೆ ಹೋಗಿದ್ದ ಸಮಯ ಮನೆಯಲ್ಲಿದ್ದ ತನ್ನ ಅಪ್ರಾಪ್ತ ವಯಸ್ಸಿನ ಮಗಳಿಗೆ ಬಂಟ್ವಾಳ ತಾಲೂಕಿನ ನಾರಾಯಣ ಎಂಬಾತ ಲೈಂಗಿಕ ನೀಡಿರುವುದಾಗಿ ಮಹಿಳೆಯೋರ್ವರು ನೀಡಿದ ದೂರಿಗೆ ಸಂಬಂದಿಸಿದಂತೆ
ವಿಟ್ಲ ಪೊಲೀಸ್ ಠಾಣೆಯಲ್ಲಿ ಸೋಮವಾರ ಅಕ್ರ 133/2025 ಕಲಂ: 7, 8 POCSO Act 2012 ಮತ್ತು 329(4), 75 BNS-2023 ನಂತೆ ಪ್ರಕರಣ ದಾಖಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.
























