ಮಹೇಶ್‌ ತಿಮರೋಡಿ ಒಂದು ವರ್ಷದ ಮಟ್ಟಿಗೆ ಗಡಿಪಾರು

ರಾಯಚೂರಿನ ಮಾನ್ವಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ ಪುತ್ತೂರು ಎಸಿ

ಧರ್ಮಸ್ಥಳ : ಮಹೇಶ್‌ ಶೆಟ್ಟಿ ತಿಮರೋಡಿಯನ್ನು ವಿವಿಧ ಪ್ರಕರಣದ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಲಾಗಿದೆ. ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ಮೇಲೆ 30ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿದೆ. ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ ವರದಿಯ ಆಧಾರದಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷಗಳ ಅವಧಿಗೆ ಗಡೀಪಾರು ಮಾಡಿ ಆದೇಶ ಮಾಡಲಾಗಿದೆ.





















































 
 

ಗಡಿಪಾರು ಪ್ರಕ್ರಿಯೆ ನಡೆಯುತ್ತಿರುವಾಗಲೇ ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಹೆಚ್ಚಿನ ಪ್ರಕರಣಗಳು ದಾಖಲಾದ ಹಿನ್ನಲೆಯಲ್ಲಿ ತುರ್ತಾಗಿ ಗಡಿಪಾರು ಆದೇಶ ಹೊರಡಿಸಲಾಗಿದೆ. ಬ್ರಹ್ಮಾವರ ಪೊಲೀಸ್‌ ಠಾಣೆಯ ಪ್ರಕರಣ ಮತ್ತು ಆ ಪ್ರಕರಣಕ್ಕೆ ಸಂಬಂದಿಸಿದಂತೆ ದಸ್ತಗಿರಿ ಮಾಡಲು ಬಂದಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣವನ್ನು ಹೊರತುಪಡಿಸಿ ಮೇಲಿನ 4 ಪ್ರಕರಣಗಳು ದಾಖಲಾಗಿವೆ.

ಗಡಿಪಾರು ಮಾಡಿದ ಆದೇಶದ ಪ್ರತಿ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿಗೆ ಬಂದ ಬಳಿಕ ಗಡಿಪಾರು ಮಾಡುವ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಈ ನಡುವೆ ತಿಮರೋಡಿ ಮೇಲಿರುವ ಕೇಸ್‌ಗಳಿಗೆ ಬರೀ ಗಡಿಪಾರಿನ ಶಿಕ್ಷೆ ಸಾಕೇ ಎಂಬ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಗಡಿಪಾರು ಕ್ರಮ ಕೂಡ ಷಡ್ಯಂತ್ರವಾಗಿರಬಹುದು ಎಂಬ ಅನುಮಾನ ಕೂಡ ವ್ಯಕ್ತವಾಗಿದೆ.

error: Content is protected !!
Scroll to Top