ಪ್ರಸಿದ್ಧ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ

ಕನ್ನಡ ಸಾರಸ್ವತ ಲೋಕದ ಪ್ರಸಿದ್ಧ ಕಾದಂಬರಿಕಾರ, ಹಿರಿಯ ಸಾಹಿತಿ ಎಸ್ ಎಲ್. ಭೈರಪ್ಪ ಬುಧವಾರ(ಸೆ24) ಮಧ್ಯಾಹ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಅವರಿಗೆ 94 ವರ್ಷ ಪ್ರಾಯವಾಗಿದ್ದು, ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

ಭೈರಪ್ಪ ಅವರು ಪರ್ವ, ಆವರಣ, ಗೃಹಭಂಗ ಸೇರಿದಂತೆ ಅನೇಕ ಕಾದಂಬರಿಗಳನ್ನು ಬರೆದಿದ್ದರು. ಪರ್ವ, ಉತ್ತರಕಾಂಡ, ಅವರಣ, ವಂಶವೃಕ್ಷಸೇರಿ ಹಲವು ಕೃತಿಗಳನ್ನು ಎಲ್ ಭೈರಪ್ಪ ರಚಿಸಿದ್ದರು. ಮೈಸೂರಿನಲ್ಲಿ ವಾಸವಿದ್ದರು. ಅವರ ಅನೇಕ ಕೃತಿಗಳು ಮರಾಠಿ, ಗುಜರಾತ್ ಸೇರಿದಂತೆ ದೇಶದ ಅನೇಕ ಭಾಷೆಗಳಿಗೆ ಅನುಮೋದನೆಗೊಂಡಿವೆ.

ಜ್ಞಾನಪೀಠ ಪ್ರಶಸ್ತಿಗೆ ಪರ್ಯಾಯವಾದ ಸರಸ್ವತಿ ಸಮ್ಮಾನ್ ಪ್ರಶಸ್ತಿಗೆ ಅವರು ಭಾಜನರಾಗಿದ್ದರು.





















































 
 

error: Content is protected !!
Scroll to Top