ಸೋಷಿಯಲ್‌ ಮೀಡಿಯಾದಲ್ಲಿ ಸಿಎಂ ಟೀಕೆ : ಬಿಜೆಪಿ ಐಟಿ ಸೆಲ್‌ ಯುವಕನ ವಿರುದ್ಧ ಕೇಸ್‌

ಕಟೀಲು ದೇವಳ ಪೂಜಾ ದರ ಏರಿಕೆ ಹಿನ್ನೆಲೆಯಲ್ಲಿ ಮಾಡಿದ್ದ ಟೀಕೆಗೆ ಕೇಸ್‌

ಕಾರ್ಕಳ : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆಯ ದರಗಳನ್ನು ಏರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಅವಹೇಳನಕಾರಿ ಸಂದೇಶಗಳನ್ನು ಪ್ರಸಾರ ಮಾಡಿದ ಆರೋಪದಲ್ಲಿ ಬಿಜೆಪಿ ಐಟಿ ಸೆಲ್‌ಗೆ ಸೇರಿದ ಯುವಕನ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾರ್ಕಳದ ಈದು ನಿವಾಸಿ ಪ್ರಖ್ಯಾತ್ ಬಿ.ಜೆ ಎಂದು ಗುರುತಿಸಲಾದ ಯುವಕ ಸೋಷಿಯಲ್‌ ಮೀಡಿಯಾಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಸುಳ್ಳು ಸಂದೇಶಗಳು ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ಹರಡಿದ್ದಾರೆ ಎಂದು ಆರೋಪಿಸಲಾಗಿದೆ. ರಾಜ್ಯ ಸರ್ಕಾರದ ಬೆಲೆ ಏರಿಕೆಯು ದೇವಾಲಯದ ಸೇವೆಗಳ ಮೇಲೂ ಪರಿಣಾಮ ಬೀರಿದೆ ಮತ್ತು ಇದರಿಂದಾಗಿ ಸಾರ್ವಜನಿಕ ಸಾಮರಸ್ಯಕ್ಕೆ ಭಂಗ ಬಂದಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂಬುದಾಗಿ ದೂರು ನೀಡಲಾಗಿತ್ತು.





















































 
 

ರಾಜ್ಯ ಮತ್ತು ರಾಷ್ಟ್ರೀಯ ಕಾಂಗ್ರೆಸ್ ನಾಯಕರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ಪೋಸ್ಟ್ ಮಾಡಿದ ಆರೋಪ ಪ್ರಖ್ಯಾತ್ ಮೇಲಿತ್ತು. ಈ ಹಿಂದೆ ಭವಿಷ್ಯದಲ್ಲಿ ಅಂತಹ ಪೋಸ್ಟ್‌ಗಳನ್ನು ಮಾಡುವುದಿಲ್ಲ ಎಂದು ಪೊಲೀಸರಿಗೆ ಲಿಖಿತ ಭರವಸೆ ನೀಡಿದ್ದರು ಮತ್ತು ಎಚ್ಚರಿಕೆ ನೀಡಿ ಅವರನ್ನು ಬಿಡುಗಡೆ ಮಾಡಲಾಗಿತ್ತು. ಇದರ ಹೊರತಾಗಿಯೂ ಅವರು ಮುಖ್ಯಮಂತ್ರಿಯ ವಿರುದ್ಧ ಸುಳ್ಳು ಆರೋಪಗಳನ್ನು ಸೃಷ್ಟಿಸುವುದನ್ನು ಮತ್ತು ಪ್ರಸಾರ ಮಾಡುವುದನ್ನು ಮುಂದುವರಿಸಿದ್ದಾರೆ, ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಮೂಲಕ ಸಾರ್ವಜನಿಕರನ್ನು ದಾರಿ ತಪ್ಪಿಸಿದ್ದಾರೆ ಎಂದು ಕಾರ್ಕಳ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜುನಾಥ ಜೋಗಿ ದೂರಿನಲ್ಲಿ ಆರೋಪಿಸಿದ್ದರು.

error: Content is protected !!
Scroll to Top