ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತಂದ ಪಂಚ ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕದ ಆರ್ಥಿಕ ಸ್ಥಿತಿ ಹದಗೆಟ್ಟಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.
ಸರ್ಕಾರದ ಬಳಿ ಉತ್ತರ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿಯನ್ನು ನಿರ್ವಹಣೆ ಮಾಡುವುದಕ್ಕೂ ಹಣವಿಲ್ಲ. ಒಂದು ವಾರದೊಳಗಾಗಿ ಕಲಬುರ್ಗಿ ಸೇರಿದಂತೆ ಇತರ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ನೆರೆ ಪೀಡಿತ ಪ್ರದೇಶಗಳ ಪರಿಸ್ಥಿತಿ ಬಗ್ಗೆ ಚರ್ಚೆ ಮಾಡುತ್ತೇನೆ. ಅವರಲ್ಲಿ ಪರಿಹಾರ ಕೇಳುತ್ತೇನೆ ಎಂದಿದ್ದಾರೆ.
























