ನವದೆಹಲಿ: ಅ. 9 ರಂದು ತಾಲೀಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಭಾರತಕ್ಕೆ ಭೇಟಿ ನೀಡಲಿದ್ದಾರೆ.
ಈ ಭೇಟಿಯು ಭಾರತ ಮತ್ತು ತಾಲೀಬಾನ್ ನಡುವಿನ ಸಂಬಂಧದಲ್ಲಿ ಹೊಸ ಅಧ್ಯಾಯವನ್ನು ತೆರೆಯುವ ಸಾಧ್ಯತೆ ಇದೆ. ತಾಲೀಬಾನ್ 2021 ರಲ್ಲಿ ಅಫ್ಘಾನಿಸ್ತಾನದಲ್ಲಿ ಅಧಿಕಾರ ಕೈವಶ ಮಾಡಿಕೊಂಡ ಬಳಿಕ ಭಾರತಕ್ಕೆ ನೀಡುತ್ತಿರುವ ಉನ್ನತ ಮಟ್ಟದ ಭೇಟಿ ಇದಾಗಿದೆ.
ವಿಶ್ವಸಂಸ್ಥೆಯು ಭದ್ರತಾ ಮಂಡಳಿಯು ಮುತ್ತಕಿ ಅವರ ವಿದೇಶಿ ಪ್ರವಾಸಗಳಿಗೆ ಹೇರಿದ್ದ ನಿರ್ಬಂಧಕ್ಕೆ ತಾತ್ಕಾಲಿಕ ವಿನಾಯಿತಿ ನೀಡಿದ್ದು, ಇದರಿಂದಾಗಿ ಅವರು ಭಾರತಕ್ಕೆ ಬರಲು ಸಾಧ್ಯವಾಗುತ್ತಿದೆ.
























