ಬೆಂಗಳೂರು: ರೈತರಿಗೆ ಭೂಮಿ ತೋರಿಸುವ ಸರ್ಕಾರವಲ್ಲ ರಾಜ್ಯದ ಕಾಂಗ್ರೆಸ್ ಸರ್ಕಾರ ಬದಲಾಗಿ ಆಕಾಶ ತೋರಿಸುವ ಸರ್ಕಾರ. ರೈತರ ಬಾಳಿಗೆ ಬೆಂಕಿ ಇಡುವ ಸರ್ಕಾರ ಎಂದು ವಿರೋಧ ಪಕ್ಷ ನಾಯಕ ಆರ್. ಅಶೋಕ್ ಲೇವಡಿ ಮಾಡಿದ್ದಾರೆ.
ಭೀಮಾನದಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ರೈತರಿಗೆ ಕಾಂಗ್ರೆಸ್ ಸರ್ಕಾರ ಈ ವರೆಗೂ ಬೆಳೆಹಾನಿ ಪರಿಹಾರ ನೀಡಿಲ್ಲ. ಕಾಂಗ್ರೆಸ್ ಸರ್ಕಾರ ತೆರೆದಂತಹ ಗಂಜಿ ಕೇಂದ್ರಗಳು ಮುಚ್ಚಿಕೊಂಡು ಹೋಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ರೈತರಿಗೆ ಸರಿಯಾದ ಪರಿಹಾರ ನೀಡಿದ್ದರೆ ನಾವು ಇಲ್ಲಿಗೆ ಬರುತ್ತಿರಲಿಲ್ಲ. ಈಗಾಗಲೇ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಮಾಡಿರುವ ಅನ್ಯಾಯದ ಕಾರಣಕ್ಕಾಗಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
























