ಬೈಕ್‌-ಕಾರು ತೂಕದ ಉದಾಹರಣೆ ನೀಡಿ ನಗೆಪಾಟಲಿಗೀಡಾದ ರಾಹುಲ್‌ ಗಾಂಧಿ

ವಿದೇಶದಲ್ಲಿ ರಾಗಾ ಮತ್ತೆ ಅಪ್ರಬುದ್ಧ ಭಾಷಣ

ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ವಿದೇಶದಲ್ಲಿ ಮತ್ತೊಮ್ಮೆ ತನ್ನ ಅಪ್ರಬುದ್ಧ ಭಾಷಣದಿಂದ ನಗೆಪಾಟಲಿಗೀಡಾಗಿದ್ದಾರೆ. ಕಾರು ಮತ್ತು ಬೈಕ್‌ಗಳ ತೂಕದ ಕುರಿತು ಅವರು ನೀಡಿದ ಉದಾಹರಣೆ ಸಿಕ್ಕಾಪಟ್ಟೆ ಲೇವಡಿಗೆ ಗುರಿಯಾಗಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ಲಕ್ಷಾಂತರ ಜನರು ಇದಕ್ಕೆ ನಾನಾ ಪ್ರತಿಕ್ರಿಯೆ ನೀಡಿ ರಾಹುಲ್‌ ಮತ್ತು ಕಾಂಗ್ರೆಸ್‌ನ ಕಾಲೆಲೆದಿದ್ದಾರೆ.

ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯ ಲಾಭಗಳ ಕುರಿತು ಕೊಲಂಬಿಯಾ ವಿವಿಯ ಇಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳಿಗೆ ವಿವರಿಸಲು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಾರು ಮತ್ತು ಬೈಕ್‌ನ್ನು ಉದಾಹರಯಾಗಿ ಬಳಸಿ ಅಪಹಾಸ್ಯಕ್ಕೊಳಗಾಗಿದ್ದಾರೆ. ಅನೇಕರು ಇದು ಆಲೂಗಡ್ಡೆಯಿಂದ ಚಿನ್ನ ತೆಗೆಯುವ ಸಂಶೋಧನೆಯ ಮುಂದುವರಿದ ಭಾಗ ಎಂದು ಕಾಲೆಳೆದಿದ್ದಾರೆ.





















































 
 

ರಾಹುಲ್‌ರ ಇಂಜಿನಿಯರಿಂಗ್‌ ಜ್ಞಾನವನ್ನು ಕೇಳಿದ ಬಳಿಕ ಹಾರ್ಲೆ ಡೇವಿಡ್ಸ್‌ಸನ್‌ನಿಂದ ಹಿಡಿದು ಟೊಯೋಟಾದವರೆಗೆ ಇಂಜಿನಿಯರ್‌ಗಳು ಎದೆ ಚಚ್ಚಿಕೊಳ್ಳುತ್ತಿದ್ದಾರೆ. ರಾಹುಲ್‌ ಹೇಳಿಕೆ ಮೂರ್ಖತನದ್ದು. ಇನ್ನೂ ಯಾರಿಗಾದರೂ ರಾಹುಲ್ ಜ್ಞಾನದ ಬಗ್ಗೆ ಅನುಮಾನ ಇದ್ದರೆ ಇಂದಿಗೆ ಅದು ಪೂರ್ಣ ಅಳಿಸಿ ಹೋಗಿರುತ್ತದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಮೆಡಿಲ್ಲೆನ್‌ ನಗರದ ಇಐಎ ವಿವಿಯಲ್ಲಿ ವಿದ್ಯಾರ್ಥಿಗಳ ಉದ್ದೇಶಿಸಿ ಮಾತನಾಡಿದ ರಾಹುಲ್‌, ಮೋಟಾರ್‌ ಸೈಕಲ್‌ ಏಕೆ 100 ಕೆಜಿ ಭಾರವಿರುತ್ತದೆ? ಕಾರು ಏಕೆ 3000 ಕೆಜಿ ತೂಕವಿರುತ್ತದೆ? ಒಬ್ಬ ವ್ಯಕ್ತಿ ಚಲಾಯಿಸುವ ಕಾರಿಗೆ ನಿಮಗೆ 3000 ಕೆಜಿ ಲೋಹ ಬೇಕು. ಮತ್ತೊಂದೆಡೆ 100 ಕೆಜಿ ತೂಕವಿರುವ ಬೈಕ್‌ನಲ್ಲಿ ಇಬ್ಬರು ಪ್ರಯಾಣಿಕರು ಸಂಚರಿಸುತ್ತಾರೆ. ಹಾಗಿದ್ದರೆ ಇಬ್ಬರು ಪ್ರಯಾಣಿಕರನ್ನು ಹೊತ್ತೊಯ್ಯಬಲ್ಲ ಬೈಕ್‌ಗೆ 150 ಕೆಜಿ ಲೋಹ ಸಾಕಾಗಿದ್ದರೆ, ಕಾರಿಗೇಕೆ 3000 ಕೆಜಿ ಲೋಹ ಬೇಕು? ಎಂದು ಪ್ರಶ್ನಿಸುತ್ತಾರೆ. ಜೊತೆಗೆ ನನ್ನ ಪ್ರಶ್ನೆಗೆ ಉತ್ತರ ಸಾಂಪ್ರದಾಯಿಕ ಇಂಧನದಿಂದ ಎಲೆಕ್ಟ್ರಿಕ್‌ಗೆ ಬದಲಾವಣೆಯಲ್ಲಿ ಅಡಗಿದೆ ಎನ್ನುತ್ತಾರೆ.

ಬಳಿಕ ತಮ್ಮ ಪ್ರಶ್ನೆಗೆ ತಾವೇ ಉತ್ತರ ನೀಡುವ ರಾಹುಲ್‌, ಇದಕ್ಕೆ ಉತ್ತರವೆಂದರೆ ಇಂಜಿನ್‌! ಏಕೆಂದರೆ ಅಪಘಾತವಾದಾಗ ನಿಮ್ಮನ್ನು ಕೊಲ್ಲುವುದು ಇಂಜಿನ್‌. ಸರಿ ತಾನೇ? ಮೋಟಾರ್‌ ಸೈಕಲ್‌ ಹಗುರವಾಗಿರುತ್ತದೆ. ಬೈಕ್‌ ಅಪಘಾತವಾದಾಗ ಇಂಜಿನ್‌ ನಿಮ್ಮಿಂದ ದೂರವಾಗುತ್ತದೆ. ಅಂದರೆ ಇಂಜಿನ್‌ನಿಂದ ನಿಮ್ಮ ಜೀವಕ್ಕೆ ಯಾವುದೇ ಅಪಾಯವಿಲ್ಲ. ಆದರೆ ಕಾರು ಅಪಘಾತವಾದಾಗ ಅದರ ಇಂಜಿನ್‌ ಕಾರಿನೊಳಗೆ ನುಗ್ಗಿ ನಿಮಗೆ ಗಾಯ ಮಾಡುತ್ತದೆ. ಹೀಗಾಗಿ ಇಡೀ ಕಾರನ್ನು ಇಂಜಿನ್ ನಿಮ್ಮನ್ನು ಕೊಲ್ಲದಂತೆ ರೂಪಿಸಲಾಗಿರುತ್ತದೆ ಎಂದು ರಾಹುಲ್‌ ಗಾಂಧಿ ವಿವರಣೆ ನೀಡುತ್ತಾರೆ.

ಬಳಿಕ ಇಲೆಕ್ಟ್ರಿಕ್‌ ಮೋಟಾರ್‌ಗಳು ಕೇಂದ್ರೀಕೃತ ಇಂಧನ ವ್ಯವಸ್ಥೆ ಹೊಂದಿಲ್ಲ. ಬದಲಾಗಿ ಅದು ಬೇರೆ ಬೇರೆ ಸ್ಥಳಗಳಲ್ಲಿ ಮೋಟಾರ್‌ಗಳನ್ನು ಹೊಂದಿದೆ. ಅದರರ್ಥ ಇಲೆಕ್ಟ್ರಿಕ್‌ ಮೋಟಾರ್‌ ಎಂದರೆ ಅಧಿಕಾರದ ವಿಕೇಂದ್ರೀಕರಣ ಮತ್ತು ಅದು ಹೆಚ್ಚು ಪರಿಣಾಮಕಾರಿ ಎಂದು ಪರೋಕ್ಷವಾಗಿ ಭಾರತದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರ ವಿಕೇಂದ್ರೀಕರಣಕ್ಕೆ ಒತ್ತು ನೀಡುತ್ತಿಲ್ಲ. ರಾಜ್ಯಗಳ ಮೇಲೆ ಕೇಂದ್ರ ಅಧಿಕಾರ ಚಲಾಯಿಸುತ್ತಿದೆ ಎಂದು ವಿಶ್ಲೇಷಿಸುವ ಯತ್ನ ಮಾಡಿದ್ದಾರೆ. ಆದರೆ ರಾಹುಲ್‌ ಗಾಂಧಿಯ ವಿವರಣೆ ಯಾರಿಗೂ ಅರ್ಥವಾಗಿಲ್ಲ. ಅವರು ಏನು ಹೇಳಲು ಹೊರಟಿದ್ದಾರೆ ಎಂದು ಅನೇಕರು ಪ್ರಶ್ನಿಸಿದ್ದಾರೆ.

ರಾಹುಲ್‌ ಹೇಳಿಕೆ ಬಗ್ಗೆ ವ್ಯಂಗ್ಯವಾಡಿರುವ ಬಿಜೆಪಿ ನಾಯಕ ಅಮಿತ್‌ ಮಾಳವೀಯ, ಒಂದೇ ಏಟಿಗೆ ಇಷ್ಟೊಂದು ದೊಡ್ಡ ಮೂರ್ಖತನದ ಮಾತುಗಳನ್ನು ನಾನು ಎಂದಿಗೂ ಕೇಳಿಲ್ಲ. ಯಾರಾದರೂ ಇದನ್ನು ವಿಶ್ಲೇಷಿಸಿದರೆ ನಾನು ನನ್ನ ಜ್ಞಾನ ಭಂಡಾರ ಹೆಚ್ಚಿಸಿಕೊಳ್ಳುತ್ತೇನೆ ಎಂದಿದ್ದಾರೆ.

error: Content is protected !!
Scroll to Top