ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ್‌ಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ದರ್ಶನ್ ಬಂಧನದ ಬಳಿಕ ಪರಪ್ಪನ ಅಗ್ರಹಾರ ಸೇರಿದ್ದರು. ಆದರೆ ಅಲ್ಲಿ ಅವರಿಗೆ ವಿಶೇಷ ಆತಿಥ್ಯ ನೀಡಲಾಗುತ್ತಿದೆ ಎನ್ನುವ ಕಾರಣಕ್ಕೆ ಅವರನ್ನು ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಲಾಗಿತ್ತು. ಪರಪ್ಪನ ಅಗ್ರಹಾರದಲ್ಲಿ ಇತರ ಆರೋಪಿಗಳ ಜೊತೆ ಮೈದಾನದಲ್ಲಿ ಕುಳಿತು ಸಿಗರೇಟು ಸೇದುತ್ತಿದ್ದ ದರ್ಶನ್ ಫೋಟೋ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಪೊಲೀಸರು ಲೀಗಲ್ ಸೆಲ್‌ನಲ್ಲಿ ಕಾನೂನು ಅಭಿಪ್ರಾಯ ಪಡೆದು ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ಈ ತಿಂಗಳ ಕೊನೆಗೆ ಚಾರ್ಜ್‌ಶೀಟ್ ಸಲ್ಲಿಕೆ ಸಾಧ್ಯತೆ ಇದೆ. ಆದರೆ ಪ್ರಕರಣಕ್ಕೆ ಸಂಬಂಧಿಸಿ ತಡೆ ಕೋರಿ ಓರ್ವ ಆರೋಪಿ ನ್ಯಾಯಾಲಯದ ಮೊರೆ ಹೋಗಿದ್ದಾನೆ. ಪೊಲೀಸರು ತಡೆ ತೆರವು ಮಾಡುವಂತೆ ಮೇಲ್ಮನವಿ ಸಲ್ಲಿಕೆಗೆ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
























