ಎಸೆಯಲು ದೇವರೆ ಪ್ರೇರಣೆ ನೀಡಿದ್ದಾನೆ ಎಂದು ತರ್ಕ
ನವದೆಹಲಿ: ಸುಪ್ರೀ ಕೋರ್ಟ್ನ ಮುಖ್ಯ ನ್ಯಾಯಾಧೀಶರ ಮೇಲೆ ಶೂ ಎಸೆಯಲು ಯತ್ನಿಸಿದ್ದಕ್ಕೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ, ನನ್ನ ನಿರ್ಧಾರ ಸರಿಯಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ಹೇಳಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಜೈಲು ಶಿಕ್ಷೆ ಎದುರಿಸಲು ಸಿದ್ಧ. ಈ ಕೃತ್ಯಕ್ಕೆ ನಾನು ಕ್ಷಮೆಯಾಚಿಸಲ್ಲ. ಯಾವುದೇ ರಾಜಕೀಯ ಪಕ್ಷದೊಂದಿಗೆ ನಾನು ಸಂಬಂಧ ಹೊಂದಿಲ್ಲ ಎಂದು ತಿಳಿಸಿದರು.
ಶೂ ಎಸೆಯಲು ದೇವರೆ ಪ್ರೇರಣೆ ನೀಡಿದ್ದಾನೆ. ಖಜುರಾಹೊ ಅರ್ಜಿ ವಿಚಾರಣೆ ವೇಳೆ ನ್ಯಾ.ಗವಾಯಿ ಹೇಳಿದ ಅಭಿಪ್ರಾಯದಿಂದ ನನಗೆ ರಾತ್ರಿ ನಿದ್ದೆಯೇ ಬರಲಿಲ್ಲ. ನಂತರ ಮಾರಿಷಸ್ನಲ್ಲಿ ಭಾರತೀಯ ಕಾನೂನು ವ್ಯವಸ್ಥೆಯು ಕಾನೂನಿನ ಆಳ್ವಿಕೆಯಿಂದ ನಿಯಂತ್ರಿಸಲ್ಪಡುತ್ತದೆಯೇ ಹೊರತು ಬುಲ್ಡೋಜರ್ ನಿಯಮದಿಂದ ಅಲ್ಲ ಎಂದು ಗವಾಯಿ ಹೇಳಿಕೆಯಿಂದ ನನಗೆ ಅಸಮಾಧಾನವಾಗಿತ್ತು ಎಂದು ಹೇಳಿದರು.
ಬನಾರಸ್ ಹಿಂದೂ ವಿಶ್ವವಿದ್ಯಾಲಯದಿಂದ ವೈದ್ಯಕೀಯ ಕೀಟಶಾಸ್ತ್ರದಲ್ಲಿ ಪಿಎಚ್ಡಿ ಪಡೆದಿದ್ದೇನೆ ಎಂದು ಹೇಳಿಕೊಂಡಿರುವ ಕಿಶೋರ್, ವಕೀಲ ವೃತ್ತಿ ಮಾಡುವ ಮೊದಲು ವಿಶ್ವ ಆರೋಗ್ಯ ಸಂಸ್ಥೆಗೆ ಸಲಹೆ ನೀಡಿದ್ದೇನೆ, ಮಾನಸಿಕವಾಗಿಯೂ ನಾನು ಸ್ಥಿಮಿತದಲ್ಲಿದ್ದೇನೆ ಎಂದಿದ್ದಾರೆ. ನನ್ನ ಕೃತ್ಯದಿಂದ ಕುಟುಂಬದವರು ಅಸಮಾಧಾನಗೊಂಡಿದ್ದಾರೆ ಎನ್ನುವುದು ನನಗೆ ತಿಳಿದಿದೆ. ಮುಂದೆ ಯಾವುದೇ ರೀತಿಯ ಪರಿಣಾಮ ಎದುರಿಸಲು ನಾನು ಸಿದ್ಧನಿದ್ದೇನೆ. ದೇವರ ಹೆಸರಿನಲ್ಲೇ ಎಲ್ಲವನ್ನೂ ಸಹಿಸುತ್ತೇನೆ ಎಂದು ಹೇಳಿದ್ದಾರೆ.
























