RSS ಮುಖಂಡ ಪ್ರೊ. ಕೃ. ನರಹರಿ ನಿಧನ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕ, ಮಾಜಿ ಪರಿಷತ್ ಸದಸ್ಯ ಪ್ರೊ. ಕೃ. ನರಹರಿ(93) ಅವರು ನಿಧನರಾಗಿದ್ದಾರೆ‌.

ಬೆಂಗಳೂರಿನಲ್ಲಿರುವ ತಮ್ಮ ಸ್ವ ಗೃಹದಲ್ಲಿ ವಯೋಸಹಜ ಸಮಸ್ಯೆಗಳಿಂದ ಅವರು ಇಹಲೋಕ ತ್ಯಜಿಸಿದ್ದಾರೆ. ಅವರು ಈ ಹಿಂದೆ RSS ನ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶಿಕ್ಷಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದವರು.

ಅವರು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹೋರಾಟ ನಡೆಸಿ ಜೈಲು ವಾಸ ಅನುಭವಿಸಿದ್ದರು‌. ಶ್ರೀಯುತರ ನಿಧನಕ್ಕೆ ಹಲವಾರು ಗಣ್ಯರು, ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ.





















































 
 
error: Content is protected !!
Scroll to Top