ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಭರತ್ ಕುಮ್ಡೇಲು ಕೋರ್ಟ್‌ಗೆ ಶರಣಾಗಿದ್ದಾರೆ.
SDPI ಕಾರ್ಯಕರ್ತ ಅಶ್ರಫ್ ಕಲಾಯಿ, ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಭರತ್ ಕುಮ್ಡೇಲು ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿದೆ. ಅಶ್ರಫ್ ಕಲಾಯಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಆಗಿ ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಪ್ರಕರಣದ ಆರೋಪಿಗಳು ಪ್ರತಿ ತಿಂಗಳು ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಕಳೆದ 3-4 ತಿಂಗಳಲ್ಲಿ ವಿಚಾರಣೆಗೆ ಹಾಜರಾಗದೆ ಭರತ್ ತಲೆಮರೆಸಿಕೊಂಡಿದ್ದು, ಇದೇ ಕಾರಣಕ್ಕೆ ಕೋರ್ಟ್ ವಾರೆಂಟ್ ಹೊರಡಿಸಿತ್ತು.
ಜೊತೆಗೆ ಎಲ್ಲ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು, ವಾರೆಂಟ್ ಮತ್ತು ಕೋಕಾ ಕೇಸು ಹಿನ್ನೆಲೆಯಲ್ಲಿ ಮಂಗಳೂರಿನ ಜಿಲ್ಲಾ ಕೋರ್ಟಿಗೆ ಭರತ್ ಶುಕ್ರವಾರ ಶರಣಾಗಿದ್ದಾರೆ.
























