ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೇಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಮಾಡಿಕೊಂಡ ಮನವಿಯ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಹಿ. ವರದರಾಜ್ ಅವರು ಮಂಗಳವಾರ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾನೂನಿನನ್ವಯ ದರ್ಶನ್ಗೆ ನೀಡಲಾಗಿರುವ ಸೌಲಭ್ಯಗಳಿಗೆ ಸಂಬಂಧಿಸಿದ ಹಾಗೆ ಜೈಲಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಇದೇ ಸಂದರ್ಭದಲ್ಲಿ ಆರೋಪಿ ದರ್ಶನ್ ಇದ್ದ ಸೆಲ್ಗೂ ಭೇಟಿ ನೀಡಿದ್ದು, ಅವರ ಬಳಿಯೂ ಮಾಹಿತಿ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ. ಈ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ಬಳಿಕ ದರ್ಶನ್ಗೆ ಸೌಲಭ್ಯ ನೀಡುವ ವಿಷಯದಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
























