ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ರೂ. ಮೌಲ್ಯದ ಪಟಾಕಿ ದಾಸ್ತಾನು ಜಪ್ತಿ ಮಾಡಿದ ಪೊಲೀಸರು

ಕಾರ್ಕಳ: ಮಾರಾಟದ ಉದ್ದೇಶದಿಂದ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಅಪಾರ ಪ್ರಮಾಣದ ಸುಡುಮದ್ದು‌ಗಳನ್ನು ಕಾರ್ಕಳ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.

ಖಚಿತ, ಗುಪ್ತ ಮಾಹಿತಿಯನ್ನು ಆಧರಿಸಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು ಮೂರು ಕಂಟೇನರ್‌ನಷ್ಟು ಪ್ರಮಾಣದ ಪಟಾಕಿಗಳನ್ನು ವಶಕ್ಕೆ ಪಡೆಯಲಾಗಿದೆ. ಲಕ್ಷಾಂತರ ಮೌಲ್ಯದ ಈ ಪಟಾಕಿಗಳನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿತ್ತು. ಪರವಾನಗಿ ಹೊಂದಿರದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.

ದೀಪಾವಳಿ ಹಬ್ಬದ ಕಾರಣಕ್ಕೆ ಪಟಾಕಿ ಮಾರಾಟಗಾರರ ಮೇಲೆ ಪೊಲೀಸ್ ಕಣ್ಗಾವಲು ಹೆಚ್ಚಿಸಿದ್ದು, ಅಕ್ರಮವಾಗಿ, ಪರವಾನಗಿ ಇಲ್ಲದೆ ಪಟಾಕಿ ದಾಸ್ತಾನು, ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ.





















































 
 

error: Content is protected !!
Scroll to Top