ಬೆಂಗಳೂರು: ಮುಂದಿನ ಬಿಹಾರ ಚುನಾವಣೆಗೆ ಹಣ ಸಂಗ್ರಹ ಮಾಡುವ ಉದ್ದೇಶದಿಂದ ಸಿ ಎಂ ಸಿದ್ದರಾಮಯ್ಯ ಅವರು ಸಹೋದ್ಯೋಗಿಗಳಿಗೆ ಔತಣಕೂಟ ಆಯೋಜನೆ ಮಾಡಿದ್ದರು ಎಂದು ಸಂಸದ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಎಟಿಎಂ ಕರ್ನಾಟಕ ಎಂಬಂತಾಗಿದೆ. ಆಡಳಿತದಲ್ಲೂ ನಿರಾಸಕ್ತಿ ಹೊಂದಿರುವ ಸಿದ್ದರಾಮಯ್ಯ ಅವರು ಸಿ ಎಂ ಆಗಿ ಕಾರ್ಯ ನಿರ್ವಹಣೆ ಮಾಡುವಲ್ಲಿಯೂ ವಿಫಲರಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಬಿಹಾರದ ಮುಂದಿನ ವಿಧಾನಸಭಾ ಚುನಾವಣೆಗೆ ಹಣ ಸಂಗ್ರಹ ಮಾಡಲು ಕಾಂಗ್ರೆಸ್ ಸಿದ್ದರಾಮಯ್ಯ ಅವರಿಗೆ ಹೇಳಿದೆ. ಹಾಗಾಗಿ ಅವರು ಸಹೋದ್ಯೋಗಿಗಳಿಗೆ ಔತಣ ಕೂಟ ಏರ್ಪಡಿಸಿದ್ದರು. ಈ ವೇಳೆ ಚುನಾವಣೆಗೆ ಹಣ ನೀಡುವಂತೆ ಎಲ್ಲರಿಗೂ ಅವರು ತಿಳಿಸಿದ್ದಾರೆ ಎಂದು ಶೆಟ್ಟರ್ ಹೇಳಿದ್ದಾರೆ.
























