ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸ್‌ ಆಗಲು ಶೇ.33 ಅಂಕ ಸಾಕು

ಫಲಿತಾಂಶ ಹೆಚ್ಚಿಸಲು ಕನಿಷ್ಠ ಅಂಕ ಮಿತಿ ಇಳಿಕೆ

ಬೆಂಗಳೂರು: ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಶೇ. 33 ಅಂಕ ಪಡೆದರೆ ಸಾಕು. ಸರ್ಕಾರ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ತೇರ್ಗಡೆಗೆ ಇದ್ದ ಕನಿಷ್ಠ ಅಂಕಮಿತಿಯನ್ನು ಇನ್ನಷ್ಟು ಕಡಿಮೆಗೊಳಿಸಿದ್ದು, ಈ ಮೂಲಕ ಫಲಿತಾಂಶ ಹೆಚ್ಚಿಸುವ ಪ್ರಯತ್ನ ಮಾಡಿದೆ.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.33 ಅಂಕ ಪಡೆದರೆ ಉತ್ತೀರ್ಣ ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಮೊದಲು ತೇರ್ಗಡೆಯಾಗಬೇಕಾದರೆ ಶೇ. 35 ಕನಿಷ್ಠ ಅಂಕ ಪಡೆಯಬೇಕಿತ್ತು.





















































 
 

ಪ್ರಸಕ್ತ ವರ್ಷದಿಂದ ಶೇ.33 ಅಂಕ ಪಡೆದರೆ ಎಸ್‌ಎಸ್‌ಎಲ್‌ಸಿ ಉತ್ತೀರ್ಣ ಎಂದು ಘೋಷಿಸಲಾಗುವುದು. 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಅಂತೆಯೇ ಪಿಯುಸಿಯಲ್ಲಿ 600ರಲ್ಲಿ 198 ಅಂಕ ಪಡೆದರೆ ಸಾಕು. ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ ಶೇ. 33 ಪಡೆಯಬೇಕಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ 3 ಪರೀಕ್ಷೆ ವ್ಯವಸ್ಥೆ ಜಾರಿ ಮಾಡಿದ್ದೇವೆ. ಪಾರದರ್ಶಕವಾಗಿ ಇರಲಿ ಅಂತ ವೆಬ್‌ಕಾಸ್ಟ್ ಮಾಡಿದ್ದೆವು. ಪರೀಕ್ಷೆಗಳು ಉತ್ತಮವಾಗಿ ನಡೆದವು ಎಂದಿದ್ದಾರೆ.

ವೆಬ್‌ಕಾಸ್ಟಿಂಗ್‌ನಿಂದ ಕಡಿಮೆ ಅಂಕ ಬಂದಾಗ ಶಿಕ್ಷಕರು ಜವಾಬ್ದಾರಿ ತಗೊಂಡು ಕೆಲಸ ಮಾಡಿದರು. ವಿಶೇಷ ತರಗತಿ ಪಡೆದು ವಿದ್ಯಾರ್ಥಿಗಳನ್ನು ತಯಾರು ಮಾಡಿದರು. ಆದ್ದರಿಂದ ಉತ್ತಮ ಫಲಿತಾಂಶ ಬಂದಿದೆ ಎಂದು ವಿವರಿಸಿದರು. ಇದೀಗ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಶೇ. 33 ರಷ್ಟು ಉತ್ತೀರ್ಣದ ಅಂಕ ನಿಗದಿ ಮಾಡಲಾಗಿದೆ. 625ಕ್ಕೆ 206 ಅಂಕ ಪಡೆದರೆ ಅಥವಾ ಆಯಾ ವಿಷಯದ ಒಟ್ಟು ಅಂಕಗಳಲ್ಲಿ 30 ಅಂಕ ಪಡೆದಿರಬೇಕು. ಆಂತರಿಕ ಮತ್ತು ಬಾಹ್ಯ ಅಂಕ ಸೇರಿ ಒಟ್ಟು ಶೇ. 33 ರಷ್ಟು ಅಂಕ ಪಡೆದ ವಿದ್ಯಾರ್ಥಿಯನ್ನು ಉತ್ತೀರ್ಣ ಎಂದು ಘೋಷಿಸಲಾಗುತ್ತದೆ ತಿಳಿಸಿದರು.

2025-26ನೇ ಸಾಲಿನಿಂದ ಈ ನಿಯಮ ಜಾರಿಗೆ ಬರಲಿದೆ. ಈ ವರ್ಷ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು, ರಿಪೀಟರ್ಸ್, ಖಾಸಗಿ ಅಭ್ಯರ್ಥಿಗಳಿಗೂ ಈ ನಿಯಮ ಜಾರಿಯಾಗಲಿದೆ.

error: Content is protected !!
Scroll to Top