ನಡುರಸ್ತೆಯಲ್ಲೇ ಬಸ್‌ ಬೆಂಕಿಗಾಹುತಿ : 36 ಪ್ರಯಾಣಿಕರು ಪಾರು

ಟಯರ್‌ ಬ್ಲಾಸ್ಟ್‌ ಆಗಿ ಬಸ್‌ ಬೆಂಕಿಗಾಹುತಿ

ಬೆಂಗಳೂರು: ಖಾಸಗಿ ಬಸ್‌ಗೆ ನಡುರಸ್ತೆಯಲ್ಲೇ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದಿರುವ ಘಟನೆ ಆಂಧ್ರದ ಅನಂತಪುರ ಜಿಲ್ಲೆಗೆ 15 ಕಿಮೀ ದೂರದಲ್ಲಿರುವ ಗರ‍್ಲದಿನ್ನೆ ಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ ಬಸ್‌ ಅನಂತಪುರದ ಬಳಿ ತಲುಪಿದಾಗ ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್‌ ಬಸ್‌ನಲ್ಲಿದ್ದ 36 ಮಂದಿ ಪ್ರಯಾಣಿಕರುಸುರಕ್ಷಿತವಾಗಿ ಪಾರಾಗಿದ್ದಾರೆ.

ಈ ಬಸ್‌ ಬೆಂಗಳೂರು-ಅನಂತಪುರ ಹೈವೇನಲ್ಲಿ ಹೋಗುತ್ತಿರುವಾಗ ಟಯರ್‌ ಬ್ಲಾಸ್ಟ್‌ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಟಯರ್‌ ಬ್ಲಾಸ್ಟ್‌ ಆಗುತ್ತಿದ್ದಂತೆ ಪ್ರಯಾಣಿಕರು ತಮ್ಮ ಲಗೇಜ್‌ಗಳನ್ನು ಬಿಟ್ಟು ಬಸ್‌ನಿಂದ ಜಿಗಿದಿದ್ದಾರೆ. ಹೀಗಾಗಿ ಪ್ರಯಾಣಿರ ಎಲ್ಲ ಲಗೇಜ್‌ಗಳು ಬೆಂಕಿಗೆ ಆಹುತಿಯಾಗಿವೆ. ವಿದ್ಯಾರ್ಥಿಗಳ ಪ್ರಮಾಣಪತ್ರ, ದುಬಾರಿ ವಸ್ತುಗಳು ಸುಟ್ಟು ಭಸ್ಮವಾಗಿವೆ.





















































 
 

ಬಸ್‌ನಲ್ಲಿ ವಿದ್ಯಾರ್ಥಿಗಳೂ ಸೇರಿದಂತೆ ಇತರ ಪ್ರಯಾಣಿಕರು ಇದ್ದರು. ಸಾಲು ಸಾಲು ರಜೆ ಇದ್ದ ಕಾರಣ ದೀಪಾವಳಿ ಹಬ್ಬಕ್ಕೆಂದು ಊರಿಗೆ ಹೊರಟಿದ್ದರು. ಟಯರ್‌ ಬ್ಲಾಸ್ಟ್‌ ಆಗಿ ತಡರಾತ್ರಿ 2.30ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ಆದರೂ ಚಾಲಕ ನಿರ್ಲಕ್ಷ್ಯ ವಹಿಸಿದ್ದಾನೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ನಿದ್ರೆ ಮಂಪರಿನಲ್ಲಿದ್ದ ಮಹಿಳಾ ಪ್ರಯಾಣಿಕರೊಬ್ಬರಿಗೆ ಎಚ್ಚರವಾಗಿದೆ. ಕೂಡಲೇ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿ ಕಿರುಚಿದ್ದಾರೆ. ಆದರೂ ಡ್ರೈವರ್‌ ಅರ್ಧ ಕಿಮೀ ತನಕ ಬಸ್‌ ನಿಲ್ಲಿಸಿಲ್ಲ ಎಂಬ ಆರೋಪ ಕೂಡ ಕೇಳಿಬಂದಿದೆ.

error: Content is protected !!
Scroll to Top