ಉಡುಪಿ: ಪ್ರೇಮಿಗಳಿಬ್ಬರು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ನಗರದ ಅಂಬಲಪಾಡಿಯ ಕಾಳಿಕಾಂಬ ನಗರದ ಲೇಬರ್ ಕಾಲನಿಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಮೃತರನ್ನು ಪವಿತ್ರ (17) ಹಾಗೂ ಮಲ್ಲೇಶ (23) ಎಂದು ಗುರುತಿಸಲಾಗಿದೆ. ಪವಿತ್ರ ಅಜ್ಜರಕಾಡು ಸರ್ಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಈಕೆಯ ತಾಯಿ ರಾಯಚೂರಿಗೆ ತೆರಳಿದ್ದ ಮೇಲೆ ಮಲ್ಲೇಶ ಮನೆಗೆ ಬಂದಿದ್ದ ಎನ್ನಲಾಗಿದೆ. ಬಳಿಕ ಇವರಿಬ್ಬರೂ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಉಡುಪಿ ನಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

