ಮುಖ್ಯಮಂತ್ರಿ ಆಯ್ಕೆ ನಿರ್ಧಾರ ಎಲ್ಲರದ್ದು: ಅಮಿತ್ ಶಾ

ನವದೆಹಲಿ: ಬಿಹಾರ ದಲ್ಲಿ ನವೆಂಬರ್ 6 ಮತ್ತು 11 ರಂದು ಚುನಾವಣೆ ನಡೆಯಲಿದ್ದು, 14 ರಂದು ಫಲಿತಾಂಶ ಪ್ರಕಟವಾಗಲಿದೆ.

ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾತನಾಡಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವುದನ್ನು ಚುನಾವಣಾ ನಂತರದಲ್ಲಿ ಶಾಸಕಾಂಗ ಪಕ್ಷದ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಮುಂದಿನ ಚುನಾವಣೆಯನ್ನು ನಿತೀಶ್ ಕುಮಾರ್ ನೇತೃತ್ವದಲ್ಲಿ ನಾವು ಎದುರಿಸಲಿದ್ದೇವೆ ಎಂದು ತಿಳಿಸಿದ್ದಾರೆ.

ಬಿಹಾರದ ಈ ಚುನಾವಣೆಯಲ್ಲಿ ಎನ್‌ಡಿಎ ಗೆದ್ದರೆ ನಿತೀಶ್ ಸಿ.ಎಂ. ಆಗುತ್ತಾರೆಯೇ ಎನ್ನುವ ಪ್ರಶ್ನೆಗೆ ಉತ್ತರ ನೀಡಿದ ಅವರು, ಮೈತ್ರಿಕೂಟದಲ್ಲಿ ಹಲವು ಪಕ್ಷಗಳಿವೆ. ಚುನಾವಣಾ ಬಳಿಕ ಎಲ್ಲರೂ ಕುಳಿತು ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ. ನಿತೀಶ್ ಕುಮಾರ್ ನಮ್ಮ ಮೈತ್ರಿಕೂಟವನ್ನು ಮುನ್ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ‌.





















































 
 
error: Content is protected !!
Scroll to Top