ಸಾರ್ವಜನಿಕ ಸ್ಥಳಗಳಲ್ಲಿ ನಮಾಜು ಮಾಡುವುದನ್ನು ನಿಷೇಧಿಸಲು ಯತ್ನಾಳ ಪತ್ರ

ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಮುಖ್ಯಮಂತ್ರಿಗೆ ಬರೆದ ಪತ್ರ

ಬೆಂಗಳೂರು : ಸರ್ಕಾರದ ಅನುಮತಿ ಪಡೆದುಕೊಳ್ಳದೆ ಸಾರ್ವಜನಿಕ ರಸ್ತೆ ಹಾಗೂ ಸರ್ಕಾರಿ ಆವರಣಗಳಲ್ಲಿ ನಡೆಯುವ ನಮಾಜ್‌ಗೆ ಬ್ರೇಕ್​ ಹಾಕುವಂತೆ ಆಗ್ರಹಿಸಿ ಸರ್ಕಾರಕ್ಕೆ ಶಾಸಕ ಬಸನ ಗೌಡ ಪಾಟೀಲ್‌ ಯತ್ನಾಳ ಬರೆದಿರುವ ಪತ್ರ ಸಂಚಲನ ಸೃಷ್ಟಿಸಿದೆ.

ಸರ್ಕಾರಿ ಸ್ಥಳಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಧಾರ್ಮಿಕ ಅಥವಾ ರಾಜಕೀಯ ಕಾರ್ಯಕ್ರಮಕ್ಕೆ ಕಡ್ಡಾಯ ಅನುಮತಿ ಪಡೆಯಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದ್ದು, ಈ ಸಂಬಂಧ ರೆಗ್ಯುಲೇಷನ್ ಆಫ್ ಯೂಸ್ ಆಫ್ ಗವರ್ನಮೆಂಟ್ ಪ್ರಿಮಿಸಿಸ್ ಆ್ಯಂಡ್​ ಪ್ರಾಪರ್ಟೀಸ್ ಬಿಲ್–2025ರ ಡ್ರಾಫ್ಟ್ ಸಿದ್ಧವಾಗಿರುವ ಬಗ್ಗೆಯೂ ವರದಿಯಾಗಿತ್ತು. ಇದರ ಬೆನ್ನಲ್ಲೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಸಿಎಂ ಸಿದ್ದರಾಮಯ್ಯ ಅವರಿಗೆ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್‌ ನಿಷೇಧಿಸಲು ಪತ್ರ ಬರೆದಿದ್ದಾರೆ.





















































 
 

ಅನುಮತಿಯಿಲ್ಲದೆ ರಸ್ತೆ ಹಾಗೂ ಸರ್ಕಾರಿ ಆವರಣಗಳಲ್ಲಿ ನಮಾಜ್ ಸಲ್ಲಿಸುತ್ತಿರುವ ದೃಶ್ಯಗಳು ಕಾಣಸಿಗುತ್ತಿವೆ. ಇಂತಹ ಚಟುವಟಿಕೆಗಳಿಂದ ವಾಹನ ಸಂಚಾರ ಹಾಗೂ ಪಾದಚಾರಿಗಳಿಗೆ ಅಡಚಣೆ ಉಂಟಾಗುತ್ತಿದೆ. ಇದು ಭಾರತೀಯ ಸಂವಿಧಾನದ ಕಲಂ 19 ಮತ್ತು 21ರ ಅಡಿಯಲ್ಲಿ ಖಾತರಿಯಾದ ಮುಕ್ತ ಸಂಚಾರ ಹಾಗೂ ಭದ್ರತೆ ಎಂಬ ಮೂಲಭೂತ ಹಕ್ಕುಗಳು ಉಲ್ಲಂಘನೆಯಾಗಿದೆ. ಹೀಗಾಗಿ ಸರ್ಕಾರದ ಕಚೇರಿಗಳು ಅಥವಾ ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ ನಮಾಜ್‌ಗೆ ವಿಶೇಷ ಅನುಮತಿ ನೀಡಬಾರದು. ಇತರ ಸಂಸ್ಥೆಗಳ ಕಾರ್ಯಚಟುವಟಿಕೆ ನಿರ್ಬಂಧಿಸಿ ಇಂತಹ ಧಾರ್ಮಿಕ ಚಟುವಟಿಕೆಗಳಿಗೆ ಅವಕಾಶ ನೀಡುವುದು ಆಡಳಿತದ ಮೇಲಿನ ನಂಬಿಕೆಗೆ ಚ್ಯುತಿ ತರಬಹುದಾದ ಕಾರಣ ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್​ ವರಿಷ್ಠಾಧಿಕಾರಿಗಳಿಗೆ ಸರ್ಕಾರ ಆದೇಶಿಸಬೇಕು. ಅನುಮತಿಯಿಲ್ಲದೆ ರಸ್ತೆಗಳು, ಪಾದಚಾರಿ ಮಾರ್ಗಗಳು ಅಥವಾ ಸರ್ಕಾರಿ ಆವರಣಗಳಲ್ಲಿ ನಮಾಜ್ ಸಲ್ಲಿಸಲು ಅವಕಾಶ ನೀಡದಂತೆ ಸೂಚಿಸಬೇಕು ಎಂದು ಯತ್ನಾಳ್​ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಕರ್ನಾಟಕ ಪೊಲೀಸ್ ಕಾಯ್ದೆ ಮತ್ತು ಸಂಬಂಧಿತ ಸಂಚಾರ ನಿಯಮಾವಳಿಗಳ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳನ್ನು ಧಾರ್ಮಿಕ ಉದ್ದೇಶಗಳಿಗೆ ಅನಧಿಕೃತವಾಗಿ ಬಳಸುವುದನ್ನು ತಡೆಗಟ್ಟಲು ಸ್ಪಷ್ಟವಾದ SOPಯನ್ನು ಸರ್ಕಾರ ರೂಪಿಸಬೇಕು. ಆ ಮೂಲಕ ಧರ್ಮ ನಿರಪೇಕ್ಷತೆ, ಕಾನೂನಿನ ಸಮಾನತೆ ಮತ್ತು ಸಾರ್ವಜನಿಕ ಶಿಸ್ತಿನ ಬಗ್ಗೆ ತನ್ನ ಬದ್ಧತೆಯನ್ನು ದೃಢಪಡಿಸಬೇಕು ಎಂದು ಶಾಸಕ ಯತ್ನಾಳ್​ ಆಗ್ರಹಿಸಿದ್ದಾರೆ.

error: Content is protected !!
Scroll to Top