RSS ನಮ್ಮ ಟಾರ್ಗೆಟ್ ಅಲ್ಲ: ಸಿಎಂ ‌ಸಿದ್ದರಾಮಯ್ಯ

ಮೈಸೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಾವು ಟಾರ್ಗೆಟ್ ಮಾಡುತ್ತಿಲ್ಲ. ಯಾವುದೇ ಖಾಸಗಿ ಸಂಘ – ಸಂಸ್ಥೆಗಳು ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ಪಡೆಯಬೇಕು ಎಂದು ಆದೇಶ ಹೊರಡಿಸಲಾಗಿದೆ ಎಂದು ಸಿಎಂ ‌ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಬಗ್ಗೆ ಪತ್ರಕರ್ತರ ಜೊತೆಗೆ ಮಾತನಾಡಿದ ಅವರು, ಹಿಂದೆ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿಯೇ ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿತ್ತು. ಅದನ್ನು ನಮ್ಮ ಸರ್ಕಾರ ಈಗ ಅನುಷ್ಠಾನಕ್ಕೆ ತಂದಿದೆ. ಅವರು ಕ್ರಮ ಕೈಗೊಂಡ ಸಂದರ್ಭದಲ್ಲಿ ಯಾಕೆ ಆರೆಸ್ಸೆಸ್ ವಿರೋಧ ಮಾಡಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ಬಿಜೆಪಿ ರಾಜ್ಯದ ಬಡವರ ಕೆಲಸವನ್ನು ಮಾಡುವುದಿಲ್ಲ. ಬದಲಾಗಿ ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ. ಎಲ್ಲಾ ವಿಷಯದಲ್ಲೂ ರಾಜಕಾರಣ ಮಾಡುವುದಷ್ಟೇ ಅವರ ಕೆಲಸ ಎಂದು ಅವರು ಆರೋಪಿಸಿದ್ದಾರೆ.





















































 
 

ಕಲ್ಬುರ್ಗಿಯ ಚಿತ್ತಾಪುರದಲ್ಲಿ RSS ನವರು ಹಾಕಿದ್ದ ಬ್ಯಾನರ್, ಭಗವಾಧ್ವಜಗಳನ್ನು ತೆರವು ಮಾಡಲಾಗಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಮಾಹಿತಿ ಪಡೆದ ನಂತರ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿಯಿಂದ ಶಾಂತಿಭಂಗ ಮಾಡುವುದು ಸಾಧ್ಯವಿಲ್ಲ. ಪೊಲೀಸರು ಎಲ್ಲವನ್ನೂ ನೋಡಿಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

error: Content is protected !!
Scroll to Top