ದೀಪಾವಳಿ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಪಟಾಕಿ ಸಿಡಿಸಲು ಹಲವು ನಿರ್ಬಂಧ ; ಮಾಲಿನ್ಯ ತಡೆಯಲು ಸೂಚನೆ

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ. ಜೊತೆಗೆ ಜನರ ಆರೋಗ್ಯವನ್ನು ಹದಗೆಡಿಸುತ್ತಿದೆ. ಹೀಗಾಗಿ ಮಾಲಿನ್ಯ ರಹಿತವಾಗಿ ಆಚರಿಸಲು ಮನವಿ ಮಾಡಲಾಗಿದೆ.

ಹಸಿರು ಪಟಾಕಿ ಮಾತ್ರ ಬಳಸಿ. ಪಟಾಕಿ ಬಾಕ್ಸ್‌ಗಳ ಮೇಲೆ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐರಆರ್) ಮತ್ತು ನ್ಯಾಷನಲ್ ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಇವರ ಲೋಗೋ ಹಾಗೂ ನೊಂದಾಯಿತ ಸಂಖ್ಯೆಯೊಂದಿಗೆ ಮುದ್ರಿತವಾಗಿರಬೇಕು.





















































 
 

ಅಧಿಕೃತ ಮಾರಾಟಗಾರರು ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳಗಳಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಇಡಬೇಕು. ನಿಷೇಧಿತ ಪಟಾಕಿಗಳ ಮಾರಾಟ ಕಂಡುಬಂದಲ್ಲಿ ಅಂತಹ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗುವುದು ಮತ್ತು ನಿಯಮಗಳನ್ವಯ ಕಾನೂನು ಕ್ರಮಕೈಗೊಳ್ಳಲಾಗುವುದು.

ಅಪಾರ್ಟ್ಮೆಂಟ್, ವಠಾರ, ನೆರೆಹೊರೆಯ ಮನೆಯವರು ಒಂದೆಡೆ ಕಲೆತು ಪರಿಸರ ಸ್ನೇಹಿ ದೀಪಾವಳಿ ಹಬ್ಬವನ್ನು ಆಚರಿಸಿ. ಹಬ್ಬದ ಆಚರಣೆಯಲ್ಲಿ ಬೆಳಕೇ ಪ್ರಧಾನವಾಗಿರಲಿ. ಗಿಡ, ಮರಗಳು ಮತ್ತು ಪ್ರಾಣಿ-ಪಕ್ಷಿಗಳಿಗೆ ಯಾವುದೇ ಹಾನಿಯಾಗದಂತೆ ಎಚ್ಚರವಹಿಸಿ. ಶಾಶ್ವತ ಕುರುಡತನ, ಕಿವುಡುತನಗಳಿಗೆ ಎಡೆಮಾಡಿಕೊಡದಿರಿ. ಪಟಾಕಿಗಳನ್ನು ಖರೀದಿಸುವಾಗ ಹಸಿರು ಪಟಾಕಿಗಳ ಲೇಬಲ್‌ಗಳನ್ನು ಪರಿಶೀಲಿಸಿ ಖರೀದಿಸಬೇಕು. 125 ಡೆಸಿಬಲ್ ಶಬ್ದಕ್ಕಿಂತಲೂ ಮೇಲ್ಪಟ್ಟ ಪಟಾಕಿಗಳ ಸಿಡಿಸುವುದನ್ನು ನಿಷೇಧಿಸಲಾಗಿದೆ.

ಶಿಕ್ಷಣ ಸಂಸ್ಥೆ, ಆಸ್ಪತ್ರೆ ಮತ್ತು ವೃದ್ಧಾಶ್ರಮಗಳಂತಹ ಸೂಕ್ಷ್ಮ ಪ್ರದೇಶಗಳ ಹತ್ತಿರ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಪಟಾಕಿಗಳ ಸಿಡಿಸಿದ ನಂತರ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯಬಾರದು. ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಕಸವನ್ನು ವಿಲೇವಾರಿ ಮಾಡುವ ವಾಹನಗಳಿಗೆ ನೀಡತಕ್ಕದ್ದು. ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪಿನ ನಿರ್ದೇಶನದಂತೆ ಹಸಿರು ಪಟಾಕಿಯನ್ನು ಹೊರತುಪಡಿಸಿ ಇನ್ಯಾವುದೇ ಪಟಾಕಿಗಳನ್ನು ಹಬ್ಬದ ಸಮಯದಲ್ಲಿ ರಾತ್ರಿ 8 ಗಂಟೆಯಿಂದ 10 ವರೆಗೆ ಮಾತ್ರ ಪಟಾಕಿಗಳನ್ನುಸಿಡಿಸಲು ಅವಕಾಶ ನೀಡಲಾಗಿದೆ.

error: Content is protected !!
Scroll to Top