ವಿಷ ಸೇವಿಸಿದ್ದ ವ್ಯಕ್ತಿ ಮೃತ್ಯು

ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬೆಳ್ತಂಗಡಿಯ ಕಳೆಂಜದಲ್ಲಿ ನಡೆದಿದ್ದು ಧರ್ಮಸ್ಥಳ ‌ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ. ಕಳೆಂಜ ಗ್ರಾಮದ ನಿವಾಸಿ ಅನುರಾಜ್ (43) ಮೃತ ವ್ಯಕ್ತಿಯಾಗಿದ್ದಾರೆ.

ವಿಪರೀತ ಕುಡಿತದ ಚಟ ಹೊಂದಿದ್ದ ಈತ ಅ.17ರಂದು ರಾತ್ರಿಯ ವೇಳೆ ಮನೆಯಲ್ಲಿ ವಿಷ ಸೇವಿಸಿದ್ದು ಆತನನ್ನು ಕೂಡಲೇ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತ ಚಿಕಿತ್ಸೆಗೆ ಸ್ಪಂದಿಸದೆ ಅ18ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೃತನ ಸಹೋದರ ಬಾಬು ನೀಡಿರುವ ದೂರಿನಂತೆ‌ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

error: Content is protected !!
Scroll to Top