ನವದೆಹಲಿ: ಆಗ್ನೇಯ ಏಷ್ಯಾ ರಾಷ್ಟ್ರಗಳ ಶೃಂಗಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸುವುದಾಗಿ ಹೇಳುವ ಮೂಲಕ ಅಮೆರಿಕಾ ಅಧ್ಯಕ್ಷ ಟ್ರಂಪ್ ಆಸೆಗೆ ಪ್ರಧಾನಿ ಮೋದಿ ತಣ್ಣೀರೆರಚಿದ್ದಾರೆ.
ಮಲೇಷ್ಯಾದಲ್ಲಿ ಅ. 26 – 28 ರ ವರೆಗೆ ಅಸಿಯಾನ್ ಶೃಂಗಸಭೆ ನಡೆಯಲಿದ್ದು, ಇದರಲ್ಲಿ ಪ್ರಧಾನಿ ಮೋದಿ ಭಾಗವಹಿಸುತ್ತಾರೆ ಎನ್ನಲಾಗಿತ್ತು. ಆದರೆ ಇದೀಗ ಸ್ವತಃ ಪ್ರಧಾನಿ ಮೋದಿ ಅವರೇ ಟ್ವೀಟ್ ಮಾಡಿದ್ದು, ತಾನು ಈ ಶೃಂಗಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸುತ್ತೇನೆ ಎಂದು ತಿಳಿಸಿದ್ದಾರೆ.
ಕಳೆದ ವಾರವಷ್ಟೇ ಟ್ರಂಪ್ ಮುಂದಿನ ವಾರ ನಾನು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ಕಾಯುತ್ತಿದ್ದೇನೆ ಎಂದು ಹೇಳಿದ್ದರು.
























