ಕರ್ನೂಲ್ ಬಸ್ ಬೆಂಕಿಗಾಹುತಿ: ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ನವದೆಹಲಿ: ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಪ್ರಾರ್ಥನೆ ಇದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.

ಪಿಎಂಎನ್‌ಆರ್‌ಎಫ್‌ನಿಂದ ಮೃತರ ಸಂಬಂಧಿಕರಿಗೆ 2 ಲಕ್ಷ ರೂ.ಗಳ ಪರಿಹಾರವನ್ನು ಹಾಗೂ ಗಾಯಾಳುಗಳಿಗೆ 50,000 ರೂ.ಗಳನ್ನು ನೀಡಲಾಗುವುದು ಎಂದು ಈ ಸಂದರ್ಭದಲ್ಲಿ ಪ್ರಕಟಿಸಿದ್ದಾರೆ.





















































 
 

error: Content is protected !!
Scroll to Top