ಮದ್ದೂರು: ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಅವರು ನ್ಯಾಯಾಧೀಶರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಅವರ ಹೇಳಿಕೆಯನ್ನು ಖಂಡಿಸಿ ಮದ್ದೂರಿನಲ್ಲಿ ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ವಕೀಲರುಗಳು ಪ್ರತಿಭಟನೆ ನಡೆಸಿದರು.
ಕಲುಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ RSS ಕಾರ್ಯಕರ್ತರು ಪಥ ಸಂಚಲನಕ್ಕೆ ಅವಕಾಶ ಮಾಡಿಕೊಡುವಂತೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ. ಆರ್ಎಸ್ಎಸ್ ಪರವಾಗಿ ತೀರ್ಪು ನೀಡುವುದು ಸರಿಯಲ್ಲ ಎಂದು ಅವಹೇಳನಕಾರಿಯಾಗಿ ಸ್ವಾಮೀಜಿ ಮಾತನಾಡಿದ್ದಾರೆ. ಸ್ವಾಮೀಜಿ ಹೇಳಿಕೆ ಖಂಡಿಸಿ ಮದ್ದೂರು ವಕೀಲರು ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿರುವುದಾಗಿದೆ.
<

