ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ: ಯುವಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ವಿಟ್ಲ: ಅನಂತಾಡಿಯ ಬಾಬನಕಟ್ಟೆಯಲ್ಲಿ ಯುವಕನೊಬ್ಬ ಸಮಯ ಪ್ರಜ್ಞೆ ಮೆರೆದ ಪರಿಣಾಮ ಗ್ಯಾಸ್ ಸಿಲಿಂಡರ್ ಅವಘಡದಿಂದ ಕುಟುಂಬವೊಂದು ಪಾರಾದ ಘಟನೆ ನಡೆದಿದೆ.

ಹಿರ್ತಂದ ಬೈಲು ಎಂಬಲ್ಲಿ ಅ.22ರಂದು ರಾತ್ರಿ 9.45ರ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ ಸಮಯಪ್ರಜ್ಞೆ ಮೆರೆದ ಯುವಕ ಜಯರಾಜ್‌ನ ಮುಖ ಹಾಗೂ ಕೈಗೆ ಗಾಯಗಳಾಗಿದೆ. ಘಟನೆಯಲ್ಲಿ ದ್ವಿಚಕ್ರವಾಹನ ಸಹಿತ ಮನೆಯಲ್ಲಿದ್ದ ಹಲವು ಉಪಕರಣಗಳಿಗೆ ಹಾನಿಯಾಗಿದೆ.

ತಾಯಿ ಸುಶೀಲ ಜೊತೆ ಜಯರಾಜ್ ವಾಸ್ತವ್ಯವಿರುವ ಮನೆಯಲ್ಲಿ ಅ.22ರಂದು ಗ್ಯಾಸ್ ಸಿಲಿಂಡ‌ರ್ ಮುಗಿದ ಹಿನ್ನೆಲೆಯಲ್ಲಿ ಹೊಸ ಸಿಲಿಂಡ‌ರ್ ಅಳವಡಿಸಿದ್ದು, ರೆಗ್ಯೂಲೇಟ‌ರ್ ಪಕ್ಕದಿಂದ ಗ್ಯಾಸ್ ಸೋರಿಕೆಯಾಗಿದ್ದು ಒಮ್ಮೆಲೇ ಬೆಂಕಿ ಹತ್ತಿಕೊಂಡಿದೆ. ಪರಿಣಾಮ ಅಡುಗೆ ಕೋಣೆಯಲ್ಲಿ ಬೆಂಕಿಯ ಜ್ವಾಲೆ ಆವರಿಸಿದೆ. ಈ ಸಂದರ್ಭ ಧೃತಿಗೆಡದ ಜಯರಾಜ್ ಬೆಂಕಿಯ ತೀವ್ರತೆಯ ನಡುವೆಯೂ ಸಿಲಿಂಡ‌ರ್ ಅನ್ನು ಎತ್ತಿ ಮನೆಯಿಂದ ಹೊರಗೆ ಇಟ್ಟಿದ್ದಾನೆ. ಈ ಸಂದರ್ಭ ಸ್ಥಳಕ್ಕೆ ಧಾವಿಸಿದ ನೆರೆಮನೆ ನಿವಾಸಿ ವೆಂಕಪ್ಪ ಪೂಜಾರಿ ಉರಿಯುತ್ತಿದ್ದ ಗ್ಯಾಸ್ ಸಿಲಿಂಡ‌ರ್‌ಗೆ ಒದ್ದೆ ಗೋಣಿ ಚೀಲವನ್ನು ಹಾಕಿ ಬೆಂಕಿ ನಂದಿಸಿದ್ದಾರೆ.





















































 
 

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ, ಮಾಜಿ ಅಧ್ಯಕ್ಷ ಗಣೇಶ್, ಸನತ್ ಕುಮಾ‌ರ್ ರೈ, ಗಣೇಶ್ ಬಂಟ್ರಿಂಜ, ಉಮೇಶ್ ನೆಡ್ಯಾರ, ಗ್ರಾಮ ಕರಣಿಕರು ಭೇಟಿ ನೀಡಿದ್ದಾರೆ. ಬಂಟ್ವಾಳ ಕಾರಿಂಜೇಶ್ವರ ಗ್ಯಾಸ್ ಏಜೆನ್ಸಿಯ ಕರುಣಾಕರ ಶೆಟ್ಟಿ ಭೇಟಿ ನೀಡಿ, ಪರಿಹಾರ ಕ್ರಮದ ಭರವಸೆ ನೀಡಿದ್ದಾರೆ.

error: Content is protected !!
Scroll to Top