ನೇತ್ರಾವತಿ ನದಿಗೆ ಹಾರಿ ವೃದ್ಧೆ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವೃದ್ಧೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸರಪಾಡಿಯಲ್ಲಿ ನಡೆದಿದೆ.

ಮೃತರನ್ನು ಅಲ್ಲಿಪಾದೆಯ ಉಜಿರಾಡಿ ನಿವಾಸಿ ಮೀನಾಕ್ಷಿ ಪೂಜಾರಿ (70) ಎಂದು ಗುರುತಿಸಲಾಗಿದೆ.

ಸರಪಾಡಿಯ ಅಂಗಡಿಯೊಂದಕ್ಕೆ ಹೋಗಿ ಬಂದ ಮೀನಾಕ್ಷಿ ಅವರು, ಅಲ್ಲಿಂದ ನೇರವಾಗಿ ನೇತ್ರಾವತಿ ನದಿ ಸಮೀಪ ಬಂದಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.





















































 
 

ಅಲ್ಲೇ ಸಮೀಪದಲ್ಲಿ ಮರಳು ತೆಗೆಯುತ್ತಿದ್ದ ಕಾರ್ಮಿಕರು ನದಿಗೆ ಹಾರಿ ಅವರನ್ನು ಬದುಕಿಸಲು ಪ್ರಯತ್ನ ನಡೆಸಿದರಾದರೂ, ಆ ಪ್ರಯತ್ನ ವಿಫಲವಾಗಿದೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top