ಅಂತಿಮ ಹಂತಕ್ಕೆ ತಲುಪಿದ ಬುರುಡೆ ಷಡ್ಯಂತ್ರದ ತನಿಖೆ; ಸೋಮವಾರ ನಿರ್ಣಾಯಕ ವಿಚಾರಣೆ

ತಿಮರೋಡಿ ಸಹಿತ ನಾಲ್ವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್‌

ಮಂಗಳೂರು: ಧರ್ಮಸ್ಥಳ ಬುರುಡೆ ಬುರುಡೆ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ವಿಚಾರಣೆಗಾಗಿ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಜಯಂತ್‌ ಟಿ. ಮತ್ತು ವಿಠಲ ಗೌಡ ಅವರಿಗೆ ಸೇರಿದಂತೆ ನಾಲ್ವರಿಗೆ ನೋಟಿಸ್ ನೀಡಿದ್ದು, ಈ ನೋಟಿಸ್‌ ಸುತ್ತ ನಾನಾ ರೀತಿಯ ಊಹಾಪೋಹಗಳು ಹುಟ್ಟಿಕೊಂಡಿವೆ.

ಸೋಮವಾರ ಬೆಳಿಗ್ಗೆ 10.30ಕ್ಕೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಹಾಗೂ ವಿಠಲ ಗೌಡರಿಗೆ ನೋಟಿಸ್ ನೀಡಲಾಗಿದೆ. ನೋಟಿಸ್ ನೀಡಿರುವ ಎಸ್ಐಟಿ ತನಿಖಾಧಿಕಾರಿ ಜಿತೇಂದ್ರ ದಯಾಮಾ ಹಾಜರಾಗದಿದ್ದರೆ ಬಂಧನ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಬಿಎನ್ ಎಸ್ಎಸ್ 35(3) ಅಡಿಯಲ್ಲಿ ನೀಡಲಾದ ನೋಟಿಸ್‌ನಲ್ಲಿ ಪ್ರಕರಣದ ಸಂದರ್ಭಗಳು ಮತ್ತು ಸಂಬಂಧಿತ ಸಂಗತಿಗಳನ್ನು ಖಚಿತಪಡಿಸಲು ಈ ನಾಲ್ವರ ಹಾಜರಾತಿ ಅಗತ್ಯವಿದ್ದುದಾಗಿ ವಿವರಿಸಲಾಗಿದೆ. ತನಿಖಾಧಿಕಾರಿಯು ನೋಟಿಸ್‌ನಲ್ಲಿ ಪ್ರಕರಣದ ಮಹತ್ವಪೂರ್ಣ ಅಂಶಗಳನ್ನು ಉಲ್ಲೇಖಿಸಿ, ಮಾಹಿತಿಯನ್ನು ದೃಢಪಡಿಸಲು ಅವರ ಸಹಕಾರವನ್ನು ಕೇಳಿದ್ದಾರೆ.





















































 
 

ಎಸ್ಐಟಿ ನೀಡಿರುವ ನೋಟಿಸ್‌ನಲ್ಲಿ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆಯ ಕಲಂ 35(3) ಅಡಿಯಲ್ಲಿ , ದಿನಾಂಕ 04/07/2025 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಕುರಿತಂತೆ ಸಂದರ್ಶನಕ್ಕಾಗಿ 27/10/2025 ರಂದು ಬೆಳಿಗ್ಗೆ 10.30ಕ್ಕೆ SIT ಕಚೇರಿಗೆ ಹಾಜರಾಗಲು ಸೂಚಿಸಲಾಗಿದೆ. ಯಾವುದೇ ಅಪರಾಧ ನಡೆಸಬಾರದು, ಸಾಕ್ಷ್ಯಗಳಿಗೆ ಪ್ರಭಾವ ಬೀರಬಾರದು, ನ್ಯಾಯಾಲಯದ ಮುಂದೆ ಅಥವಾ ತನಿಖಾಧಿಕಾರಿಗಳ ಮುಂದೆ ಸಂಗತಿಗಳನ್ನು ಸತ್ಯಹೀನವಾಗಿ ಹೇಳಬಾರದು, ನ್ಯಾಯಾಲಯ/ತದನಂತರ ತನಿಖೆಯಲ್ಲಿ ಹಾಜರಾಗುವುದು, ಸಹಕಾರ ನೀಡುವುದು, ಎಲ್ಲಾ ದಾಖಲೆಗಳು ಮತ್ತು ಸಾಕ್ಷ್ಯಗಳನ್ನು ಹಾಜರುಪಡಿಸುವುದು, ಆರೋಪಿಗಳ ಗುರುತಿಸುವಿಕೆ ಮತ್ತು ಬಂಧನದಲ್ಲಿ ಸಹಕಾರ ನೀಡುವುದು ಮತ್ತು ಸಾಕ್ಷ್ಯಗಳನ್ನು ನಾಶಮಾಡದಂತೆ ಮಾಡುವುದು. ನೋಟಿಸ್ ಪಾಲನೆ ಮಾಡದಿದ್ದರೆ, ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ ಕಲಂ 35(6) ಅಡಿಯಲ್ಲಿ ದಸ್ತಗಿರಿ ಕ್ರಮ ಕೈಗೊಳ್ಳಲಾಗುವುದು ಎಂದು ಸಹ ಉಲ್ಲೇಖಿಸಲಾಗಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ ಚಿನ್ನಯ್ಯ ತಾನು 100ಕ್ಕೂ ಹೆಚ್ಚು ಶವಗಳನ್ನು ಹೂತಿರುವುದಾಗಿ ಹೇಳಿದ್ದ. ಈ ಕುರಿತು ಸಾಕಷ್ಟು ಕಾರ್ಯಾಚರಣೆಗಳೂ ನಡೆದಿತ್ತು. ಇದು ಧರ್ಮಸ್ಥಳದ ವಿರುದ್ಧದ ಷಡ್ಯಂತ್ರವೆಂಬ ಆರೋಪಗಳೂ ವ್ಯಕ್ತವಾಗಿದೆ.ಅಅದಕ್ಕೆ ಪೂರಕವಾಗಿ ಎಸ್ಐಟಿ ತೆಗೆದುಕೊಂಡಿರುವ ಈ ನಿರ್ಧಾರ ಯಾವೆಲ್ಲ ಸತ್ಯಗಳನ್ನು ಬಿಚ್ಚಿಡಲಿದೆ ಎಂದು ಕಾದು ನೋಡಬೇಕಿದೆ.

error: Content is protected !!
Scroll to Top