ಪ್ರಚೋದನಕಾರಿ ಭಾಷಣ ಆರೋಪ : ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದೂರು

ಉಪ್ಪಳಿಗೆ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಪ್ರಭಾಕರ ಭಟ್‌

ಪುತ್ತೂರು: ಇತ್ತೀಚೆಗೆ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಈಶ್ವರಿ ಪದ್ಮುಂಜ ಎಂಬವರು ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅ.20ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಹಿಳೆಯರನ್ನು ಅವಮಾನಿಸಿ, ಗರ್ಭಿಣಿ ಮಹಿಳೆಯರನ್ನು ನಿಂದನೆ ಮಾಡಿದ್ದಾರೆಂದು ಆರೋಪಿಸಿ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಈಶ್ವರಿ ಪದ್ಮುಂಜದೂರು ನೀಡಿದ್ದಾರೆ.





















































 
 

ಮುಸ್ಲಿಮ್‌ ಸಮುದಾಯದವರು ಹೆಚ್ಚು ಮಕ್ಕಳನ್ನು ಹೆರುತ್ತಾರೆ. ಹಿಂದುಗಳೂ ಹೆಚ್ಚು ಮಕ್ಕಳನ್ನು ಹುಟ್ಟಿಸಬೇಕು ಎಂಬ ಅರ್ಥದಲ್ಲಿ ಕಲ್ಲಡ್ಕ ಪ್ರಭಾಕರ ಭಟ್‌ ಮಾತನಾಡಿದ್ದರು. ಸ್ಪೀಕರ್‌ ಯು.ಟಿ.ಖಾದರ್‌ ಪ್ರತಿನಿಧಿಸುತ್ತಿರುವ ಕ್ಷೇತ್ರದ ಉದಾಹರಣೆ ನೀಡಿದ್ದ ಅವರು, ಮಂಗಳೂರು ವಿಧಾನಸಭಾ ಕ್ಷೇತ್ರ ಉಳ್ಳಾಲ ಅಂತ ಏನು ಹೇಳ್ತೀವಿ ಅಲ್ಲಿ ಹಿಂದೂ ಗೆಲ್ಲಲು ಸಾಧ್ಯವೇ ಇಲ್ಲ. ಅಲ್ಲಿ ಖಾದರೇ ಗೆಲ್ಲೋದು. ಯಾಕೆಂದರೆ ಒಂದು ಲಕ್ಷದ ಹತ್ತು ಸಾವಿರ ಬ್ಯಾರಿಗಳದ್ದೇ ಓಟು ಇದೆ. ಹಿಂದೂಗಳು 90 ಸಾವಿರ ಇರೋದು. ಗೆಲ್ಲೋದು ಯಾವಾಗ? ಅದು ಎಲ್ಲಾ ಕಡೆಗೂ ಹತ್ತಿರ ಹತ್ತಿರ ಬರ್ತಾ ಉಂಟು. ನಾವು ಗೆಲ್ತೇವಾ? ಗೆಲ್ಲಲು ಸಾಧ್ಯವೇ ಇಲ್ಲ. ನಮ್ಮನ್ನು ಸರ್ವನಾಶ ಮಾಡ್ತಾರೆ. ಹಾಗಾಗಿ ನಮ್ಮ ಮನೆಯಲ್ಲಿ 3ಕ್ಕಿಂತ ಕಡಿಮೆ ಮಕ್ಕಳು ಇರಬಾರದು ಎಂದಿದ್ದರು.

error: Content is protected !!
Scroll to Top