ಪುಂಜಾಲಕಟ್ಟೆ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಅರ್ಥಪೂರ್ಣವಾಗಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಇದರ ನಿರ್ದೇಶಕರಾದ ಪ್ರೊ. ಸೀತಾರಾಮ ಕೇವಳ ಇವರು ಮಾತನಾಡಿ “ಮಕ್ಕಳ ಜೀವನವನ್ನು ರೂಪಿಸುವಲ್ಲಿ ಪೋಷಕರ ಪಾತ್ರ” ಹಾಗೂ “ಸಹಕಾರದಿಂದಲೇ ಸಾಧನೆ” ಎಂದು ಪೋಷಕರ ಮನಮುಟ್ಟುವ ಪ್ರೇರಣಾದಾಯಿ ನುಡಿಗಳನ್ನಾಡಿದರು.
ಕಾರ್ಯಕ್ರಮದ ಅಧ್ಯಕ್ಷರಾದ ಪ್ರೊ. ಮಾಧವ ಅವರು ಕಾಲೇಜಿನ ಅಭಿವೃದ್ಧಿಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಹಕಾರವನ್ನು ಉಲ್ಲೇಖಿಸಿ, ನೂತನ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ರಕ್ಷಕ-ಶಿಕ್ಷಕ ಸಂಘದ 2024-25ನೇ ಸಾಲಿನ ವರದಿ ಮತ್ತು ಲೆಕ್ಕಪತ್ರವನ್ನು ಸಂಘದ ಸಂಚಾಲಕರಾದ ಪ್ರೊ. ಸಂತೋಷ್ ಪ್ರಭು ಎಮ್. ಇವರು ಮಂಡಿಸಿದರು. ನಂತರ 2024-25ನೇ ಸಾಲಿನಲ್ಲಿ ಕಾಲೇಜಿನ ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ಕಾಲೇಜಿನ 2024-25ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿದ್ದ ಶ್ಯಾಮರಾವ್ ಉಂಡೆಮನೆ ಇವರ ಅಮೂಲ್ಯ ಸೇವೆಯನ್ನು ಪರಿಗಣಿಸಿ ಸನ್ಮಾನಿಸಲಾಯಿತು. ಮುಂದೆ 2025-26ನೇ ಸಾಲಿನ ನೂತನ ರಕ್ಷಕ ಶಿಕ್ಷಕ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಗಣೇಶ ಆಚಾರ್ಯ ಆಯ್ಕೆಯಾದರು.

ಐಕ್ಯೂಎಸಿ ಸಂಚಾಲಕರಾದ ಡಾ. ಅವಿತಾ ಮರಿಯಾ ಕ್ವಾಡ್ರಸ್ ಸ್ವಾಗತಿಸಿ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ವೈಶಾಲಿ ಯು. ವಂದಿಸಿದರು. ಸಾಂಸ್ಕೃತಿಕ ಸಂಘದ ಸಂಚಾಲಕರಾದ ಪ್ರೊ. ರೇಖಾ ಯು.ಎನ್. ಕಾರ್ಯಕ್ರಮವನ್ನು ನಿರೂಪಿಸಿದರು.
























