ಕರ್ನಾಟಕ ರಾಜ್ಯೋತ್ಸವ ಆಚರಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಏನಂದ್ರು ಗೊತ್ತಾ?

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಯ 700 ಮಕ್ಕಳ ಜೊತೆಗೆ ಒಟ್ಟು 1,700 ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದ ಸಿದ್ಧತೆಗಳನ್ನು ‌ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಪರಿಶೀಲನೆ ನಡೆಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಈ ವಿಚಾರವನ್ನು ತಿಳಿಸಿದ್ದಾರೆ.

ಇದು ನಾನು ಸಚಿವನಾದ ಮೇಲೆ ನಡೆಯುತ್ತಿರುವ ಮೂರನೇ ಕಾರ್ಯಕ್ರಮ. ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿಭಿನ್ನವಾಗಿ ರೂಪಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಎಲ್ಲಾ ಮಕ್ಕಳಿಗೂ ಪ್ರಮಾಣ ಪತ್ರ ನೀಡಲಾಗುತ್ತದೆ ಎಂದಿದ್ದಾರೆ.





















































 
 

ಸಿ ಎಂ ಸಿದ್ದರಾಮಯ್ಯ ಅವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಡಿ ಸಿ ಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಇನ್ನೂ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಅವರು ಹೇಳಿದ್ದಾರೆ.

error: Content is protected !!
Scroll to Top