ಜೋಧಪುರ್ : ರಾಜಸ್ಥಾನದ ಜೋಧಪುರ್ನಲ್ಲಿ ಭಾನುವಾರ ರಾತ್ರಿ ನಿಂತಿದ್ದ ಟ್ರಕ್ಗೆ ಟೆಂಪೋ ಟ್ರಾವಲರ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 15 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜೋಧಪುರ್ನ ಫಾಲೋದಿಯಲ್ಲಿನ ಮಟೋಡ ಗ್ರಾಮದ ಸಮೀಪದ ಭಾರತ್ ಮಾಲಾ ಎಕ್ಸ್ಪ್ರೆಸ್ವೇಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಟೆಂಪೋ ಟ್ರಾವೆಲ್ನಲ್ಲಿದ್ದವರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರೆಂದು ಹೇಳಲಾಗುತ್ತಿದೆ. ಬಿಕಾನೆರ್ನ ಕೊಲಾಯತ್ ಮಂದಿರಕ್ಕೆ ಭೇಟಿ ನೀಡಿ ಇವರು ಜೋಧಪುರ್ಗೆ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚುವರಿ ಶುಶ್ರೂಷೆಗಾಗಿ ಗಾಯಾಳುಗಳನ್ನು ಗ್ರೀನ್ ಕಾರಿಡಾರ್ ಮೂಲಕ ಜೋಧಪುರ್ನಲ್ಲಿರುವ ಆಸ್ಪತ್ರೆಗೆ ಸಾಗಿಸಲಾಯಿತು.
ರಾಜಸ್ಥಾನ್ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಘಟನೆಗೆ ಆಘಾತ ವ್ಯಕ್ತಪಡಿಸಿದ್ದು, ಮೃತರ ಸಾವಿಗೆ ಶೋಕ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸರಿಯಾಗಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಪಘಾತದಲ್ಲಿ ಜೀವ ಹಾನಿಯಾಗಿರುವುದಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲ.ರೂ. ಪರಿಹಾರ ಘೋಷಿಸಿದ್ದಾರೆ.
ವಿಪರೀತ ವೇಗವೇ ಅಪಘಾತಕ್ಕೆ ಕಾರಣ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಡಿಕ್ಕಿ ತೀವ್ರತೆಗೆ ಟೆಂಪೊ ಟ್ರಾವೆಲರ್ನ ಮುಂಭಾಗ ಪೂರ್ಣವಾಗಿ ನಜ್ಜುಗುಜ್ಜಾಗಿದ್ದ ಒಳಗೆ ಸಿಕ್ಕಿಬಿದ್ದಿದ್ದ ಪ್ರಯಾಣಿಕರನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು.
























