ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಸುಳ್ಯದ ರೇಣುಕಾಪ್ರಸಾದ್ ಕುರುಂಜಿ ಮತ್ತು ಕುಟುಂಬದವರು ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ದೇವರಿಗೆ ಸಮರ್ಪಿಸಲಿರುವ ಬೆಳ್ಳಿರಥದ ಯಾತ್ರೆಯ ಚಾಲನೆ ಬೆಳಿಗ್ಗೆ ಗಂಟೆ 8ಕ್ಕೆ ಪೂಜಾ ವಿಧಿ ವಿಧಾನಗಳೊಂದಿಗೆ ನೆರವೇರಿತು.

ಬೆಳ್ಳಿರಥ ಯಾತ್ರೆಗೆ ಚಾಲನೆಗೊಂಡ ರಥವು ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಳಕ್ಕೆ ತೆರಳಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ, ಬಳಿಕ ಕೋಟೇಶ್ವರದ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಳದ ಮುಂಭಾಗದಲ್ಲಿ ಬೆಳ್ಳಿರಥದ ಊರ್ಧ್ವಭಾಗದ ಜೋಡಣೆ ಮಾಡಲಾಯಿತು.
ನೂರಕ್ಕೂ ಅಧಿಕ ಭಕ್ತಾದಿಗಳು ಹಾಜರಿದ್ದರು.
























