ಪುತ್ರಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ

ಕೋಲಾರ: ಮಗಳನ್ನು ಕೊಂದ ತಂದೆಯೊಬ್ಬ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಳಬಾಗಿಲು ತಾಲೂಕಿನ ಮುಡಿಯನೂರಿನಲ್ಲಿ ನಡೆದಿದೆ.

ಐದು ವರ್ಷದ ಪುತ್ರಿ ನಿಹಾರಿಕಾಳನ್ನು ಕೊಂದು ತಂದೆ ಲೋಕೇಶ್ (37) ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ.

ಕೌಟುಂಬಿಕ ಕಲಹದಿಂದ ಲೋಕೇಶ್ ಅವರ ಪತ್ನಿ ಮನೆ ಬಿಟ್ಟು ನಾಪತ್ತೆಯಾಗಿದ್ದರು‌. ಇದರಿಂದ ನೊಂದ ಲೋಕೇಶ್ ಪುತ್ರಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆ ಬಳಿಕ ಶವವನ್ನು ಕಾರಿನಲ್ಲಿಟ್ಟು ಲೋಕೇಶ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ.





















































 
 

ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಮುಳಬಾಗಿಲು ಗ್ರಾಮಾಂತರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top