ಬೆಳಗಾವಿ: ಕಬ್ಬಿಗೆ 3,300 ರೂ. ಬೆಲೆ ನಿಗದಿ ಮಾಡಿರುವ ರಾಜ್ಯ ಸರ್ಕಾರದ ನಡೆಗೆ ಮುಧೋಳ ಭಾಗದ ರೈತರು ಅಸಮಾಧಾನ ವ್ಯಕ್ತಪಡಿಸಿದ್ದು, ತಮ್ಮ ಬೇಡಿಕೆಗೆ ಸ್ಪಂದಿಸದೇ ಇದ್ದಲ್ಲಿ ಹೋರಾಟ ತೀವ್ರ ಸ್ವರೂಪ ಪಡೆಯುವ ಎಚ್ಚರಿಕೆಯನ್ನು ಸರ್ಕಾರಕ್ಕೆ ರವಾನಿಸಿದ್ದಾರೆ.
ಮುಧೋಳದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಸಾವಿರಾರು ರೈತರು ಸೇರಿ ಸರ್ಕಾರದ ವಿರುದ್ಧ ಧರಣಿ ಮಾಡಿದ್ದಾರೆ. ಸರ್ಕಾರ ನಿಗದಿ ಮಾಡಿರುವ ಬೆಲೆ ತಮಗೆ ಸಾಲುವುದಿಲ್ಲ. ಇದು ರೈತರಿಗೆ ಮಾಡುತ್ತಿರುವ ಅನ್ಯಾಯ. ಕಬ್ಬು ಟನ್‌ಗೆ 3,500 ರೂ. ಇರಲೇಬೇಕು ಎಂದು ಆಗ್ರಹಿಸಿದ್ದಾರೆ.
ಸರ್ಕಾರ 3,300 ರೂ. ನಿಗದಿ ಮಾಡಿದ್ದು ಕೇವಲ ತೋರಿಕೆಯ ಕ್ರಮವಾಗಿದೆ. ಇದರಿಂದ ರೈತರಿಗೆ ಯೋಗ್ಯ ಲಾಭ ದೊರಕುವುದಿಲ್ಲ. ಇದು ಪರಿಶ್ರಮಕ್ಕೆ ತಕ್ಕ ಮೌಲ್ಯವಲ್ಲ, ಭಿಕ್ಷೆ ನೀಡುವಂತಿದೆ. ಇದನ್ನು ರೈತರು ಒಪ್ಪುವುದಿಲ್ಲ ಎಂದು ರೈತರು ತಿಳಿಸಿದ್ದಾರೆ.
























